ಭುವನೇಶ್ವರ: ಒಡಿಶಾದ ಗೋಪಾಲ್‌ಪುರ್ ಬೀಚ್ ನಲ್ಲಿ 20 ವರ್ಷದ ಯುವತಿ ಮೇಲೆ ಕಾಮಪಿಪಾಸುಗಳು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ
ಇದೀಗ 10 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.
ಭಾನುವಾರ ರಾತ್ರಿ ಈ ಘಟನೆ ನಡೆದಿದೆ. ರಾಜಾ ಉತ್ಸವದ ಸಂದರ್ಭದಲ್ಲಿ ಪದವಿ ವಿದ್ಯಾರ್ಥಿನಿ ತನ್ನ ಗೆಳೆಯನ ಜೊತೆ ಕಡಲತೀರಕ್ಕೆ ತೆರಳಿದ್ದಳು.
ಖಾಲಿ ಜಾಗದಲ್ಲಿ ಇಬ್ಬರೇ ಕುಳಿತಿದ್ದ ವೇಳೆ 10 ಮಂದಿ ಯುವಕರು ಸುತ್ತುವರಿದು ನನ್ನ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದರು ಎಂದು ಗೋಪಾಲ್‌ಪುರ ಪೊಲೀಸ್ ಠಾಣೆಗೆ ಯುವತಿ ದೂರು ನೀಡಿದ್ದಳು.
ಮೊದಲು ಏಳು ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿತ್ತು. ನಂತರ, ಎಲ್ಲ 10 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.
ಆರೋಪಿಗಳು ಬೇರೆ ರಾಜ್ಯಕ್ಕೆ ಪರಾರಿಯಾಗಲು ಯತ್ನಿಸಿದ ವೇಳೆ ಅವರನ್ನು ಬಂಧಿಸಲಾಗಿದೆ. ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ.
ಪ್ರಕರಣ ಕುರಿತು ಪ್ರತಿಕ್ರಿಯಿಸಿರುವ ಉಪಮುಖ್ಯಮಂತ್ರಿ ಪ್ರವತಿ ಪರಿದಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸರವಣ ವಿವೇಕ್ ಜೊತೆ ಮಾತುಕತೆ ನಡೆಸಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ.