ಮೈಸೂರು: ಮೈಸೂರಿನಲ್ಲಿ ನಡೆದ ಹಾಸ್ಯ ಸಂಜೆ ಕಾರ್ಯಕ್ರಮದಲ್ಲಿ ಹಾಸ್ಯ ಕಲಾವಿದರಾದ ಗಂಗಾವತಿ ಪ್ರಾಣೇಶ್ ಹಾಗೂ ನರಸಿಂಹ ಜೋಶಿ ಅವರನ್ನು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು.
ಸರಸ್ವತಿಪುರಂನಲ್ಲಿರುವ ಶ್ರೀ ಕೃಷ್ಣದಾಮ ದಲ್ಲಿ ನಡೆದ ಹಾಸ್ಯ ಸಂಜೆ ಕಾರ್ಯಕ್ರಮದಲ್ಲಿ ಹಾಸ್ಯದ ಮೂಲಕ ಮನರಂಜಿಸಿದ ಗಂಗಾವತಿ ಪ್ರಾಣೇಶ್ ಹಾಗೂ ನರಸಿಂಹ ಜೋಶಿ ಅವರನ್ನು ಮಯೂರ ಕನ್ನಡ ಯುವಕರ ಬಳಗದ ವತಿಯಿಂದ ಸನ್ಮಾನಿಸಲಾಯಿತು.
ಶ್ರೀ ಕೃಷ್ಣ ಟ್ರಸ್ಟ್ ಉಪಾಧ್ಯಕ್ಷ ರವಿ ಶಾಸ್ತ್ರಿ, ಮಯೂರ ಕನ್ನಡ ಯುವಕರ ಬಳಗದ ಅಧ್ಯಕ್ಷಜಿ ರಾಘವೇಂದ್ರ, ಕೆಪಿಸಿಸಿ ಸದಸ್ಯರಾದ ನಜರ್ಬಾದ್ ನಟರಾಜ್, ಜೆಡಿಎಸ್ ಕಾರ್ಯದಕ್ಷ ಪ್ರಕಾಶ್ ಪ್ರಿಯದರ್ಶನ್,ಕೆಎಂ ಪಿ ಕೆ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್, ಅರಿವು ಸಂಸ್ಥೆಯ ಅಧ್ಯಕ್ಷ ಶ್ರೀಕಾಂತ್ ಕಶ್ಯಪ್, ಭೈರತಿ ಲಿಂಗರಾಜು ಮತ್ತಿತರರು ಉಪಸ್ಥಿತರಿದ್ದರು.
