ವ್ಯಕ್ತಿ ಅರೆಸ್ಟ್-540 ಗ್ರಾಂ ಗಾಂಜಾ ವಶ

Spread the love

ಮೈಸೂರು: ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನ ನಂಜನಗೂಡು ಪಟ್ಟಣ ಪೊಲೀಸರು ಬಂಧಿಸಿದ್ದಾರೆ.

ಮೊಹಮ್ಮದ್ ಮಸೂದ್ (30) ಎಂಬಾತನನ್ನು ಬಂಧಿಸಲಾಗಿದೆ.

ಈ ವ್ಯಕ್ತಿ ನಂಜನಗೂಡಿನ ಕಲ್ಲಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಬೈಕ್‌ನಲ್ಲಿ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಆಧರಿಸಿ ಪೊಲೀಸರು ದಾಳಿ ಮಾಡಿದ್ದಾರೆ.

ಇನ್ಸ್ಪೆಕ್ಟರ್ ಸಿ.ಎಂ ರವೀಂದ್ರ, ಪಿಎಸ್ಐ ಕೃಷ್ಣಕಾಂತಕೋಳಿ ನೇತೃತ್ವದ ತಂಡ ದಾಳಿ ನಡೆಸಿ ಮೊಹಮ್ಮದ್ ಮಸೂದ್ ನನ್ನು ಬಂಧಿಸಿದ್ದಾರೆ.

ಆರೋಪಿಯಿಂದ ಪೊಲೀಸರು 29 ಪೊಟ್ಟಣಗಳ ಒಟ್ಟು 540 ಗ್ರಾಂ ಗಾಂಜಾ, 550 ರೂ ನಗದು ಹಾಗೂ ದ್ವಿಚಕ್ರ ವಾಹನ ವಶ ಪಡಿಸಿಕೊಂಡಿದ್ದಾರೆ.

ನಂಜನಗೂಡು ಪಟ್ಟಣ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.