ಮೈಸೂರು: ಮೈಸೂರಿನ ವಸ್ತು ಪ್ರದರ್ಶನ ಮೈದಾನ ಬಳಿ ನಡೆದ ಬಾಲಕಿ ಮೇಲಿನ ಅತ್ಯಾಚಾರ, ಕೊಲೆ ಪ್ರಕರಣ ತೀವ್ರ ಖಂಡನಿಯ ಎಂದು ಕನ್ನಡ ಚಳವಳಿಗಾರ ತೇಜಸ್ವಿ ನಾಗಲಿಂಗಸ್ವಾಮಿ ತಿಳಿಸಿದ್ದಾರೆ.
ಪೋಲಿಸ್ ಇಲಾಖೆ ನೈಟ್ ಬಿಟ್ ನಲ್ಲಿ ಕೆಲವು ಬದಲಾವಣೆ ತಂದರೆ ಇಂತಹ ಅಪರಾಧ ಕೃತ್ಯಗಳನ್ನು ನಿಯಂತ್ರಿಸ ಬಹುದು ಎಂದು ತೇಜಸ್ವಿ ನಾಗಲಿಂಗಸ್ವಾಮಿ ಅಭಿಪ್ರಾಯ ಪಟ್ಟಿದ್ದಾರೆ.
ಆರೋಪಿಗೆ ಕೂಡಲೇ ಕಠಿಣ ಶಿಕ್ಷೆ ನೀಡಬೇಕೆಂದು ಅವರು ಆಗ್ರಹಿಸಿದ್ದಾರೆ.
ಇಂತಹ ಅತ್ಯಾಚಾರ ಕೊಲೆ ಪ್ರಕರಣಗಳು ನಡೆಯುತ್ತಲೇ ಇವೆ. ಕೆಲವು ತಿಂಗಳ ಹಿಂದೆ ಮೈಸೂರಿನಲ್ಲಿ ಬಿಕ್ಷಕಿ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿದ್ದರು. ಆ ಪ್ರಕರಣ ಮಾಸುವ ಮುನ್ನವೇ ಮೈಸೂರಿನ ಹೃದಯ ಭಾಗದಲ್ಲಿ ಇಂತಹ ಹೇಯಕೃತ್ಯ ನಡೆದಿದ್ದು ಅತ್ಯಂತ ಆತಂಕ ಉಂಟು ಮಾಡಿದೆ ಎಂದು ತೇಜಸ್ವಿ ನಾಗಲಿಂಗಸ್ವಾಮಿ ತಿಳಿಸಿದ್ದಾರೆ.
ಎರಡು ದಿನಗಳ ಹಿಂದೆ ಇದೇ ಸ್ಥಳದಲ್ಲಿ ವ್ಯಕ್ತಿ ಯೊಬ್ಬನನ್ನು ಮಾರಕಾಸ್ತ್ರ ಗಳಿಂದ ಕೊಚ್ಚಿ ಹತ್ಯೆ ಮಾಡಲಾಗಿತ್ತು,ಅದಾದ ಎರಡೇ ದಿನದಲ್ಲಿ ಆದೆ ಸ್ಥಳದ ಆಸುಪಾಸಿನಲ್ಲಿ ಬಾಲಕಿ ಮೇಲೆ ಅತ್ಯಾಚಾರ ಮತ್ತು ಕೊಲೆ ಮಾಡಿರುವುದು ಪೋಲಿಸ್ ಇಲಾಖೆಯ ವೈಫಲ್ಯ ಎದ್ದು ಕಾಣುತ್ತದೆ ಎಂದು ತೇಜಸ್ವಿ ನಾಗಲಿಂಗಸ್ವಾಮಿ ಆರೋಪಿಸಿದ್ದಾರೆ.
ಬಾಲಕಿಯ ಕುಟುಂಬಕ್ಕೆ ಪರಿಹಾರವನ್ನು ಘೋಷಿಸುವಂತೆ ಸರ್ಕಾರಕ್ಕೆ ತೇಜಸ್ವಿ ಮನವಿ ಮಾಡಿದ್ದಾರೆ.
ಈ ಪ್ರಕರಣವನ್ನು ಪೋಲಿಸ್ ಇಲಾಖೆ ಅತ್ಯಂತ ಸೂಕ್ಷ್ಮವಾಗಿ ಮತ್ತು ಗಂಭೀರವಾಗಿ ಪರಿಗಣಿಸಬೇಕು, ಇನ್ನು ಮುಂದೆ ರಾತ್ರಿ ಗಸ್ತು ತಿರುಗುವ ಪಾಳಯದಲ್ಲಿ ಬದಲಾವಣೆ ತರಬೇಕು ಬದಲಾವಣೆ ಆದಲ್ಲಿ ಮಾತ್ರ ( ಹೊಸತನ ) ಇಂತಹಾ ಅಪರಾಧ ಕೃತ್ಯಗಳನ್ನು ತಡೆಯಲು ಸಾಧ್ಯವಾಗುತ್ತದೆ ಎಂದು ಹೇಳಿದ್ದಾರೆ.
ಅತ್ಯಾಚಾರ ಪ್ರಕರಣಗಳಲ್ಲಿ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸುವ ಕಾನೂನನ್ನು ಜಾರಿಗೆ ತರುವ ಮೂಲಕ ರಾಜ್ಯದಲ್ಲಿ ಇಂತಹ ಅತ್ಯಾಚಾರ ಪ್ರಕರಣಗಳು ತಡೆಗಟ್ಟಬೇಕೆಂದು ತೇಜಸ್ವಿ ನಾಗಲಿಂಗಸ್ವಾಮಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.