ಚಾಕೋಲೆಟ್ ಆಸೆ ತೋರಿಸಿ ಬಾಲಕಿ ಹೊತ್ತೊಯ್ದು ಅತ್ಯಾಚಾರ: ಕೊ*ಲೆ

Spread the love

ಹುಬ್ಬಳ್ಳಿ: ಚಾಕೋಲೆಟ್ ಆಸೆ ತೋರಿಸಿ ಏನೂ ಅರಿಯದ ೫ ವರ್ಷದ ಕಂದಮ್ಮನನ್ನು ಅಪಹರಿಸಿದ ಕಾಮ ಪಿಶಾಚಿ ಅತ್ಯಾಚಾರ ಮಾಡಿ ಕೊಲೆ ಮಾಡಿದ ಪೈಶಾಚಿಕ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಮಗುವಿನ ತಾಯಿ ಮನೆಯ ಒಳಗೆ ಕೆಲಸ ಮಾಡುತ್ತಿದ್ದರು, ಮಗು ಮನೆಯ ಹೊರಗೆ ಆಟವಾಡುತ್ತಿತ್ತು,ಈ ವೇಳೆ ಮನೆಯ ಬಳಿ ಬಂದ ಆರೋಪಿ ಗೇಟ್ ತೆರೆದು ಒಳ ನುಗ್ಗಿ ಬಾಲಕಿಗೆ ಚಾಕಲೇಟ್ ಆಸೆ ತೋರಿಸಿ ಹೊತ್ತೊಯ್ದಿದ್ದಾನೆ.

ಬಳಿಕ ಅತ್ಯಾಚಾರವೆಸಗಿ ಕೊಲೆ ಮಾಡಿ ಪರಾರಿಯಾಗಿದ್ದಾನೆ. ಆರೋಪಿ ಮನೆಯ ಬಳಿ ಬರುತ್ತಿರುವ ಬಲಕಿಯನ್ನು ಹೊಯ್ದ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಬಿಹಾರ ಮೂಲದ ಯುವಕ ಈ ನೀಚ ಕೃತ್ಯ ಎಸಗಿದ್ದಾನೆ, ಹುಬ್ಬಳ್ಳಿ ಅಶೋಕನಗರ ಠಾಣೆಗೆ ನುಗ್ಗಿರುವ ಬಾಲಕಿ ಪೋಷಕರು ಹಾಗೂ ಸಾರ್ವಜನಿಕರು, ಆರೋಪಿಯನ್ನು ಬಂಧಿಸಿ ತಮಗೆ ಒಪ್ಪಿಸುವಂತೆ ಪಟ್ಟು ಹಿಡಿದರು.

ಬಾಲಕಿಯ ಅತ್ಯಾಚಾರಕ್ಕೆ ಯತ್ನಿಸಿ ಹತ್ಯೆ ಮಾಡಿದ ಹಿನ್ನಲೆಯಲ್ಲಿ ರೊಚ್ಚಿಗೆದ್ದ ಜನತೆ ದುಷ್ಕರ್ಮಿಗೆ ಕಠಿಣ ಶಿಕ್ಷೆ ನೀಡುವಂತೆ ಒತ್ತಾಯಿಸಿ ಬಾಲಕಿಯ ಕುಟಂಬಸ್ಥರೊಂದಿಗೆ ಅಶೋಕ ನಗರ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ ಸ್ಥಳಕ್ಕೆ ಕಮಿಷನರ್ ಎನ್.ಶಶಿಕುಮಾರ್ ಭೇಟಿ ನೀಡಿ ಜನರನ್ನು ಸಮಾಧಾನಪಡಿಸಲು ಯತ್ನಿಸಿದರು .

ಕೆಲ ಸಮಯ ಪೊಲೀಸ್ ಠಾಣೆ ಮುಂದೆ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.ನಂತರ ಹಿರಿಯ ಅಧಿಕಾರಿಗಳು ಸಾರ್ವಜನಿಕರನ್ನು ಸಮಾಧಾನಪಡಿಸಿ,ಆರೋಪಿಯನ್ನು ಬಂಧಿಸಿ ಕಠಿಣ ಶಿಕ್ಷೆ ನೀಡುವುದಾಗಿ ಭರವಸೆ ನೀಡಿದ್ದಾರೆ.

ಆದರೆ ಮಗುವಿನ ತಂದೆ,ತಾಯಿಯ ರೋಧನ ಮುಗಿಲು ಮುಟ್ಟಿದ್ದು ಎಂತಹ ಕಠಿಣ ಹೃದಯದವರು ಕೂಡಾ ಮರುಗುವಂತಿತ್ತು