ದಸರಾ ಮನೆಮನೆ ಗೊಂಬೆ ಸ್ಪರ್ಧಿಗಳಿಗೆ ಬಹುಮಾನ ವಿತರಣೆ

Spread the love

ಮೈಸೂರು: ಚಾಮುಂಡಿಪುರಂನಲ್ಲಿರುವ ಅಪೂರ್ವ ಹೋಟೆಲ್ ಸಭಾಂಗಣದಲ್ಲಿ ಶ್ರೀ ದುರ್ಗಾ ಫೌಂಡೇಶನ್ ವತಿಯಿಂದ ಆಯೋಜಿಸಿದ್ದ ಮನೆಮನೆ ಗೊಂಬೆ ಕೂರಿಸುವ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ವಿಜೇತರಾದ ಜೆಪಿ ನಗರದ ನಿವಾಸಿ ರಶ್ಮಿ, ಲಕ್ಷ್ಮಿಪುರಂ ನಿವಾಸಿ ಉಷಾ, ಬೆಂಗಳೂರು ನಿವಾಸಿ ಮಂಜುಳಾ,ಹಾಸನ ನಿವಾಸಿ ಗುರು, ಬೆಂಗಳೂರು ನಿವಾಸಿ ರಮ್ಯ, ಶ್ರೀರಾಂಪುರ ನಿವಾಸಿ ಪೂಜಾ ಪುನೀತ್, ಚಾಮುಂಡಿಪುರಂ ನಿವಾಸಿ ಶಾರದಾ, ರಾಮಕೃಷ್ಣ ನಗರ ನಿವಾಸಿ ಜಗಲಕ್ಷ್ಮಿ, ಅಗ್ರಹಾರ ನಿವಾಸಿ ಕಾರ್ತಿಕ್, ರಾಮಕೃಷ್ಣ ನಗರ ನಿವಾಸಿ ಸ್ವರೂಪಿಣಿ ಅವರುಗಳಿಗೆ ಬಹುಮಾನ ವಿತರಿಸಲಾಯಿತು

ಇದೇ ವೇಳೆ ನೂರಕ್ಕೂ ಹೆಚ್ಚು ಭಾಗವಹಿಸಿದ ಸ್ಪರ್ಧಿಗಳಿಗೆ ಪ್ರಮಾಣ ಪತ್ರ ನೀಡಲಾಯಿತು.

ಬಹುಮಾನ ವಿತರಿಸಿ ಮಾತನಾಡಿದ ಹಿರಿಯ ಸಮಾಜ ಸೇವಕ ಕೆ ರಘುರಾಮ ವಾಜಪಾಯಿ ಅವರು,ಸಂಸ್ಕೃತಿ ಮತ್ತು ನಮ್ಮ ಪರಂಪರೆಯ ಉಳಿವಿಗಾಗಿ ಹೋರಾಡುವ ಸಂದರ್ಭ ಎದುರಾಗಿದೆ, ಪ್ರತಿಯೊಬ್ಬರು ಅದಕ್ಕಾಗಿ ಶ್ರಮಿಸಬೇಕು ಎಂದು ಕರೆ ನೀಡಿದರು.

ನಮ್ಮ ಸಂಪ್ರದಾಯ ಮತ್ತು ಧಾರ್ಮಿಕತೆಯ ರಕ್ಷಣೆಗಾಗಿ ಪ್ರತಿಯೊಬ್ಬ ಹಿಂದುಗಳು ಒಗ್ಗಟ್ಟಾಗಿ ಕಲೆತು ಮುಂದಿನ ಪೀಳಿಗೆಗೆ ಸಂರಕ್ಷಿಸಬೇಕು ಎಂದು ಹೇಳಿದರು .

ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಡಿ ಟಿ ಪ್ರಕಾಶ್ ಅವರು ಮಾತನಾಡಿ,ನವರಾತ್ರಿಯು ಮೈಸೂರು ಪರಂಪರೆಯಲ್ಲಿ ಅತ್ಯಂತ ಪವಿತ್ರವಾದದ್ದು. ದಸರಾ ಗೊಂಬೆ ಪ್ರದರ್ಶನಕ್ಕೆ ಅತ್ಯಂತ ಮಹತ್ವವಿದೆ,ಪಟ್ಟದ ಗೊಂಬೆಗಳನ್ನು ಲಕ್ಷ್ಮಿನಾರಾಯಣ ಸ್ವರೂಪದಲ್ಲಿ ಪೂಜಿಸಿ ಪುರಾಣ ಪುಣ್ಯಕಥೆಗಳನ್ನು ಗೊಂಬೆಗಳ ಮೂಲಕ ರೂಪಕವಾಗಿ ಪ್ರಚುರಪಡಿಸಿ ಅದನ್ನು ಮುಂದಿನ ಪೀಳಿಗೆಗೆ ಪರಿಚಯಿಸುವುದೇ ಇದರ ಮೂಲ ಉದ್ದೇಶ, ಮೈಸೂರಿನ ಮನೆಮನೆಗಳಲ್ಲಿ ಕೂರಿಸುವುದರಿಂದ ಗೃಹಿಣಿಯರು ನಮ್ಮ ಪರಂಪರೆಯನ್ನು ಉಳಿಸಿ ಬೆಳೆಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಉದ್ಯಮಿಗಳಾದ ಜಯರಾಮ್, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಕೆ ಎಂ ಪಿ ಕೆ ಟ್ರಸ್ಟ್ ಅಧ್ಯಕ್ಷ ಅಯ್ಯಂಗಾರ್, ಸಮಾಜ ಸೇವಕರಾದ ಮಂಜುಳಾ ಸೋಮಣ್ಣ,ಕೋಮಲ ಮಣಿ, ಶ್ರುತಿ, ಸಹನಾ, ತಾರಾ ಮತ್ತಿತರರು ಹಾಜರಿದ್ದರು.