ಮೈಸೂರು: ದೀಪಾವಳಿ ಹಬ್ಬದ ಪ್ರಯುಕ್ತ ನಗರದ ಇರ್ವಿನ್ ರಸ್ತೆಯಲ್ಲಿರುವ ಶ್ರೀ ಪಂಚಮುಖಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಗೋಪೂಜೆ ನೆರವೇರಿಸಲಾಯಿತು.
ದೇವಸ್ಥಾನದ ಪ್ರಧಾನ ಅರ್ಚಕರಾದ ವಿದ್ವಾನ್ ಕೃಷ್ಣಮೂರ್ತಿ ಅವರ ನೇತೃತ್ವದಲ್ಲಿ ಗೋಪೂಜೆ ನೆರವೇರಿಸಿ, ಭಕ್ತಾದಿಗಳಿಗೆ ಪ್ರಸಾದ ವಿನಿಯೋಗ ಮಾಡಲಾಯಿತು.

ಈ ವೇಳೆ ವಿದ್ವಾನ್ ಕೃಷ್ಣಮೂರ್ತಿ ಅವರು ಮಾತನಾಡಿ, ಕಳೆದ 26 ವರ್ಷಗಳಿಂದ ಈ ಪಂಚಮುಖಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಅರ್ಚಕ ವೃತ್ತಿಯನ್ನು ಮಾಡಿಕೊಂಡು ಬಂದಿದ್ದೇನೆ ಎಂದು ತಿಳಿಸಿದರು.
ಈ ನಮ್ಮ ದೇವಸ್ಥಾನದಲ್ಲಿ ದೀಪಾವಳಿಯ ಹಬ್ಬದಂದು ಪ್ರತಿ ವರ್ಷವೂ ಗೋಪೂಜೆಯನ್ನು ಮಾಡಿಕೊಂಡು ಬರುತ್ತಿದ್ದೇವೆ ಎಂದು ಹೇಳಿದರು.
ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಅವರು ಕೂಡ ಮುಜರಾಯಿ ದೇವಾಲಯಗಳಲ್ಲಿ ದೀಪಾವಳಿ ಹಬ್ಬದಂದು ಗೋ ಪೂಜೆ ನೆರವೇರಿಸುವಂತೆ ಆದೇಶ ಮಾಡಿದ್ದಾರೆ.ಅದರಂತೆ ಪೂಜೆಯನ್ನು ನೆರವೇರಿಸಿ ನಾಡಿನ ಎಲ್ಲ ಜನತೆಗೆ ದೀಪಾವಳಿ ಹಬ್ಬ ಶುಭವನ್ನು ತರಲಿ ಎಂದು ಪ್ರಾರ್ಥಿಸಿದ್ದೇವೆ ಎಂದು ತಿಳಿಸಿದರು.
ನಾಡಿನ ಸಮಸ್ತ ಜನರಿಗೂ ಆಯಸ್ಸು ಆರೋಗ್ಯ ಕೊಟ್ಟು ಆಂಜನೇಯ ಸ್ವಾಮಿಯು ಸಕಲ ಸನ್ಮಂಗಳವನ್ನು ಉಂಟು ಮಾಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ನುಡಿದರು.
ಬಲಿಪಾಡ್ಯಮಿ ಪ್ರಯುಕ್ತ ಶ್ರೀ ಸ್ವಾಮಿಗೆ ವಿಶೇಷ ಅಭಿಷೇಕ, ಅಲಂಕಾರ, ಪೂಜೆಯನ್ನು ನೆರವೇರಿಸಲಾಗಿದೆ. ಶ್ರೀ ಸ್ವಾಮಿಯು ಎಲ್ಲರಿಗೂ ಒಳಿತು ಮಾಡಲಿ ಎಂದು ಕೃಷ್ಣಮೂರ್ತಿ ಅವರು ಹಾರೈಸಿದರು.