ವಿಜಯಪುರ: ಆಸ್ತಿ ವಿವಾದದ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ ಆರು ಮಂದಿಯನ್ನು ಭೀಕರವಾಗಿ ಹತ್ಯೆ ಮಾಡಿದ ಘನಘೋರ ದುರಂತ ನಡೆದುಹೋಗಿದೆ.ಇಡೀ ಜಿಲ್ಕೆಯಲ್ಲಿ ಆತಂಕ ಮನೆ ಮಾಡಿದೆ.
ಆರು ಮಂದಿಯಲ್ಲಿ ಕೆಲವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿದರೆ ಇನ್ನೊಂದಿಬ್ಬರನ್ನು ಗುಂಡು ಹಾರಿಸಿ ಕೊಲ್ಲಲಾಗಿದೆ.ಇದರಿಂದಾಗಿ ಇಡೀ ಜಿಲ್ಲೆ ಅಷ್ಟೇ ಅಲ್ಲಾ ಇಡೀ ರಾಜ್ಯವೆ ಬೆಚ್ಚಿ ಬಿದ್ದಿದೆ.
ರೇವಣಸಿದ್ದಪ್ಪ ನಿರಾಳೆ, ದುಂಡಪ್ಪ ರೇವಣಸಿದ್ದಪ್ಪ ನಿರಾಳೆ, ಶಿವಪುತ್ರ ರೇವಣಸಿದ್ದಪ್ಪ ನಿರಾಳೆ, ಚಂದ್ರಶೇಖರ್ ನಿರಾಳೆ, ಶಬ್ಬಿರ್ ನದಾಫ್ ಕೊಲೆಯಾದ ನತದೃಷ್ಟರು.
ನಿರಾಳೆ ಹಾಗೂ ಗೊಳಗಿ ಕುಟುಂಬಗಳ ನಡುವೆ ಜಮೀನು ವ್ಯಾಜ್ಯವಿದ್ದು,ಇದೇ ಕಾರಣದಿಂದ ನಿರಾಳೆ ಕುಟುಂಬದವರ ಮೇಲೆ ಸೇಡು ತೀರಿಸಿಕೊಳ್ಳು ಈ ಹತ್ಯೆಗಳು ನಡೆದಿವೆ.
ಬಹಳ ಹಿಂದಿನಿಂದಲೂ ರಕ್ತದೋಕುಳಿಗೆ ಕುಪ್ರಸಿದ್ದವಾಗಿದ್ದ ಭೀಮಾತೀರ ಕೆಲ ವರ್ಷಗಳಿಂದ ಶಾಂತವಾಗಿಯೇ ಇತ್ತು.ಆದರೆ ಭೀಮಾತೀರ ಮತ್ತೊಮ್ಮೆ ರಕ್ತಸಿಕ್ತವಾಗಿದೆ.
ಹತ್ಯೆಯಾದವರಲ್ಲಿ ಐವರು ಒಂದೇ ಕುಟುಂಬಕ್ಕೆ ಸೇರಿದವರು ಎಂದು ಪೊಲೀಸರು ತಿಳಿಸಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳ ತಂಡ ಸಶಸ್ತ್ರ ಪಡೆಗಳೊಂದಿಗೆ ಗೋವಿಂದಪುರ ಗ್ರಾಮಕ್ಕೆ ಧಾವಿಸಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ,ಮತ್ತೆ ಅಹಿತಕರ ಘಟನೆ ನಡೆಯದಂತೆ ಇಡೀ ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
