ಬೆಂಗಳೂರು: ಕೆಂಗೇರಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಸೇರಿದ ಸರ್ಕಾರಿ ಜಾಗವನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿರುವ ಗಂಭೀರ ಆರೋಪಗಳು
ಕೇಳಿ ಬಂದಿದ್ದು,ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಮ್ ಆದ್ಮಿಪಕ್ಷ ಆಗ್ರಹಿಸಿದೆ.
ಈ ಭೂ ಕಬಳಿಕೆ ಅಧಿಕಾರ ದುರುಪಯೋಗ, ರಾಜಕೀಯ ಒತ್ತಡ ಹಾಗೂ ಸ್ವಜನ ಪಕ್ಷಪಾತದ ಮೂಲಕ
ರಾಜ್ಯದ ಶಿಕ್ಷಣ ಕ್ಷೇತ್ರವನ್ನೇ ತಲ್ಲಣಗೊಳಿಸಿವೆ. ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವರಾದ ವಿ. ಸೋಮಣ್ಣ ಅವರ ಕುಟುಂಬದ ಒಡೆತನಕ್ಕೆ ಸೇರಿದ ಜ್ಞಾನಮಿತ್ರ ಎನ್ಪಿಎಸ್ ಶಾಲೆಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಸರ್ಕಾರಿ ಶಿಕ್ಷಣ ಸಂಸ್ಥೆಯ ಜಾಗವನ್ನು ಕಬಳಿಸುವ ಪ್ರಯತ್ನ ನಡೆದಿರುವುದು ಅತ್ಯಂತ ಖಂಡನೀಯ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾಡಿದ ಅವಮಾನವಾಗಿದೆ ಎಂದು ಆಪ್ ಹೇಳಿದೆ.
ಈ ವಿಷಯವನ್ನು ಹಲವು ತಿಂಗಳುಗಳಿಂದ ನಿರಂತರವಾಗಿ ಹೋರಾಟದ ಮೂಲಕ ಬಹಿರಂಗಪಡಿಸುತ್ತಿರುವ ಆಮ್ ಆದ್ಮಿ ಪಕ್ಷದ ಸ್ಥಳೀಯ ಮುಖಂಡ ಹಾಗೂ ಸಂಘಟನಾ ಕಾರ್ಯದರ್ಶಿ ಶಶಿಧರ್ ಆರಾಧ್ಯ ಅವರಿಗೆ ಸ್ಥಳೀಯ ಪ್ರಭಾವಿಗಳು ಹಾಗೂ ಸಮಾಜಘಾತುಕ ಶಕ್ತಿಗಳಿಂದ ಜೀವ ಬೆದರಿಕೆ ಸೇರಿದಂತೆ ವಿವಿಧ ರೀತಿಯ ಒತ್ತಡಗಳು ಬರುತ್ತಿರುವುದು ಕಾನೂನು ಸುವ್ಯವಸ್ಥೆಯ ಮೇಲಿನ ಪ್ರಶ್ನೆಯನ್ನು ಎತ್ತಿದೆ.
ಸರ್ಕಾರಿ ಆಸ್ತಿಯನ್ನು ರಕ್ಷಿಸಲು ಹೋರಾಟ ನಡೆಸುತ್ತಿರುವವರನ್ನು ಬೆದರಿಸುವ ಮೂಲಕ ಸತ್ಯವನ್ನು ಹತ್ತಿಕ್ಕುವ ಪ್ರಯತ್ನಗಳು ನಡೆಯುತ್ತಿವೆ ಎಂದು ಆಪ್ ಆರೋಪಿಸಿದೆ.
ಇಂದು ಸ್ಥಳಕ್ಕೆ ಭೇಟಿ ನೀಡಿದ ಆಮ್ ಆದ್ಮಿ ಪಕ್ಷದ ಕರ್ನಾಟಕ ರಾಜ್ಯ ಸಂಘಟನಾ ಕಾರ್ಯದರ್ಶಿ ಡಾ. ಸತೀಶ್ ಕುಮಾರ್ ಅವರು ಮಾತನಾಡಿ,ಲಕ್ಷಾಂತರ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳು ಶಿಕ್ಷಣ ಪಡೆಯುವ ಸರ್ಕಾರಿ ಶಾಲೆ ಮತ್ತು ಕಾಲೇಜುಗಳ ಜಾಗವನ್ನು ಯಾವುದೇ ಪ್ರಭಾವಿಗಳು, ಅಧಿಕಾರಿಗಳು ಅಥವಾ ರಾಜಕಾರಣಿಗಳ ಕುಟುಂಬಗಳು ಕಬಳಿಸಲು ಆಮ್ ಆದ್ಮಿ ಪಕ್ಷ ಅವಕಾಶ ನೀಡುವುದಿಲ್ಲ. ಸರ್ಕಾರಿ ಶಿಕ್ಷಣವನ್ನು ಉಳಿಸುವ ಹೋರಾಟದಲ್ಲಿ ನಾವು ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಹೇಳಿದರು.
ಕೇಂದ್ರ ಸಚಿವ ವಿ. ಸೋಮಣ್ಣ ಅವರ ಕುಟುಂಬದ ಸಂಸ್ಥೆಗೆ ಅನುಕೂಲ ಕಲ್ಪಿಸಲು ಸರ್ಕಾರಿ ಪದವಿಪೂರ್ವ ಕಾಲೇಜಿನ ಜಾಗವನ್ನು ಬಳಸಿಕೊಳ್ಳುವ ಪ್ರಯತ್ನ ನಡೆದಿದ್ದರೆ, ಅದು ಕೇವಲ ಅಕ್ರಮವಲ್ಲ, ಅಧಿಕಾರದ ದುರ್ಬಳಕೆಯಾಗಿದೆ ಎಂದು ಹೇಳಿದರು.
ಸಾಮಾನ್ಯ ನಾಗರಿಕರು ಸರ್ಕಾರಿ ಜಾಗವನ್ನು ಅತಿಕ್ರಮಿಸಿದರೆ ಬುಲ್ಡೋಜರ್ ಬಳಸಿ ತೆರವುಗೊಳಿಸುವ ಸರ್ಕಾರಗಳು, ಅಧಿಕಾರದಲ್ಲಿರುವ ರಾಜಕಾರಣಿಗಳ ಕುಟುಂಬಗಳ ವಿರುದ್ಧ ಮಾತ್ರ ಮೌನವಾಗಿರುವುದು ಬಡವರಿಗೊಂದು ಕಾನೂನು, ಉಳ್ಳವರಿಗೊಂದು ಕಾನೂನು ಎಂಬಂತಾಗಿದೆ ಎಂದು ಅವರು ಕಿಡಿಕಾರಿದರು.
ಸರ್ಕಾರಿ ಜಾಗದ ಅಕ್ರಮ ಒತ್ತುವರಿಗೆ ನೆರವು ನೀಡಿರುವ ಬಿಡಿಎ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸ್ಥಳೀಯ ಮುಖಂಡ ಶಶಿಧರ್ ಆರಾಧ್ಯ ಅವರು, ನಾನು ಸರ್ಕಾರಿ ಶಿಕ್ಷಣ ಸಂಸ್ಥೆಯ ಆಸ್ತಿಯನ್ನು ಉಳಿಸುವ ಉದ್ದೇಶದಿಂದ ಕಾನೂನುಬದ್ಧವಾಗಿ ಬಿಡಿಎ, ಪೊಲೀಸ್ ಇಲಾಖೆ ಹಾಗೂ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದೇನೆ. ಆದರೆ, ಸತ್ಯವನ್ನು ಬಹಿರಂಗಪಡಿಸಿದ್ದಕ್ಕಾಗಿ ನನ್ನ ಮೇಲೆ ಬೆದರಿಕೆಗಳು ಬರುತ್ತಿವೆ. ಬೆದರಿಕೆಗಳಿಗೆ ಹೆದರಿ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಈ ಹೋರಾಟ ಒಬ್ಬ ವ್ಯಕ್ತಿಯ ವಿರುದ್ಧವಲ್ಲ; ಸರ್ಕಾರಿ ಶಿಕ್ಷಣ ವ್ಯವಸ್ಥೆಯನ್ನು ಉಳಿಸುವ ಹೋರಾಟವಾಗಿದೆ ಎಂದು ಹೇಳಿದರು.
ಸರ್ಕಾರಿ ಕಾಲೇಜಿನ ಜಾಗವನ್ನು ಖಾಸಗಿ ಶಿಕ್ಷಣ ಸಂಸ್ಥೆಗೆ ನೀಡುವ ಮೂಲಕ ಬಡ ವಿದ್ಯಾರ್ಥಿಗಳ ಭವಿಷ್ಯವನ್ನು ಕಸಿದುಕೊಳ್ಳುವ ಯಾವುದೇ ಪ್ರಯತ್ನವನ್ನು ನಾವು ಸಹಿಸುವುದಿಲ್ಲ. ಕೇಂದ್ರ ಸಚಿವರ ಕುಟುಂಬದವರಾಗಿದ್ದರೂ ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಸಾರ್ವಜನಿಕ ಆಸ್ತಿಯನ್ನು ಕಬಳಿಸುವ ಪ್ರಯತ್ನ ಮಾಡಿದವರು ಕಾನೂನಿನ ಮುಂದೆ ಉತ್ತರಿಸಲೇಬೇಕಿದೆ ಎಂದು ಅವರು ಎಚ್ಚರಿಸಿದರು.
ಆಮ್ ಆದ್ಮಿ ಪಕ್ಷವು ಸರ್ಕಾರಿ ಶಿಕ್ಷಣ ಸಂಸ್ಥೆಗಳ ರಕ್ಷಣೆಯ ವಿಚಾರದಲ್ಲಿ ರಾಜ್ಯಾದ್ಯಂತ ಜನಾಂದೋಲನ ರೂಪಿಸುವ ಸಂಕಲ್ಪ ಹೊಂದಿದ್ದು, ನ್ಯಾಯ ದೊರೆಯುವವರೆಗೆ ಹಾಗೂ ಸರ್ಕಾರಿ ಜಾಗವನ್ನು ಸಂಪೂರ್ಣವಾಗಿ ರಕ್ಷಿಸುವವರೆಗೆ ಹೋರಾಟ ಮುಂದುವರಿಯಲಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಆಮ್ ಆದ್ಮಿ ಪಕ್ಷದ ಮುಖಂಡರಾದ ಜಗದೀಶ್ ಚಂದ್ರ, ನವೀನ್ ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದು, ಸರ್ಕಾರಿ ಶಿಕ್ಷಣ ಸಂಸ್ಥೆಗಳ ರಕ್ಷಣೆಗೆ ಪಕ್ಷದ ಹೋರಾಟಕ್ಕೆ ತಮ್ಮ ಸಂಪೂರ್ಣ ಬೆಂಬಲವನ್ನು ವ್ಯಕ್ತಪಡಿಸಿದರು.