ಮೈಸೂರು: ಅಥರ್ವ ಲೈಫ್ ಸ್ಕಿಲ್ಸ್ ಫೌಂಡೇಶನ್ ಹಾಗೂ ಕರುಣೆ ಸೇವಾ ಟ್ರಸ್ಟ್ ವತಿಯಿಂದ ಗೌರಿ ಗಣೇಶ ಹಬ್ಬದ ಅಂಗವಾಗಿ ಅರಮನೆಯಲ್ಲಿ ಸ್ವಚ್ಛಗೊಳಿಸುವ ಪೌರಕಾರ್ಮಿಕರಿಗೆ ಬಾಗಿನ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಅರಮನೆ ಕೋಟಿ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗ ಆಗಸ್ಟ್ 22ರಂದು ಬೆಳಿಗ್ಗೆ 10.30ಕ್ಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರುಣೆ ಟ್ರಸ್ಟ್ ಅಧ್ಯಕ್ಷೆ ರುಕ್ಮಿಣಿ ತಿಳಿಸಿದ್ದಾರೆ.