ಮೈಸೂರು: ಮೈಸೂರಿನ ಕೆಎಚ್ ಬಿ ಕಾಲೋನಿ ಎನ್‍ಹೆಚ್ ಬಿ ನಿವಾಸಿಗಳ ಗಣಪತಿ ಸೇವಾ ಸಮಿತಿ ವತಿಯಿಂದ ಗೌರಿ ಗಣೇಶ ಹಬ್ಬವನ್ನು ವಿಶೇಷವಾಗಿ ಆಚರಿಸಲಾಯಿತು.
ಕಾಲೋನಿಯ ನಿವಾಸಿಗಳ ಅನುಕೂಲಕ್ಕಾಗಿ ಸಮಿತಿ ವತಿಯಿಂದ ಗೀತಾ ಡಯಾಗ್ನೋಸ್ಟಿಕ್ ಸೆಂಟರ್ ಸಹಯೋಗದಲ್ಲಿ ಉಚಿತ ಮಧುಮೇಹ ಹಾಗೂ ರಕ್ತದೊತ್ತಡ ತಪಾಸಣೆಯನ್ನು ಮಾಡಿಸಲಾಯಿತು.
ಈ ಸಂದರ್ಭದಲ್ಲಿ ಸಮಿತಿಯ ಎಲ್ಲಾ ಪದಾಧಿಕಾರಿಗಳು ಹಾಗೂ ನಿವಾಸಿಗಳು ಹಾಜರಿದ್ದರು.