ಮೈಸೂರು: ಪಂಚಾಯತ್ ಗ್ರಾಮಾಭಿವೃದ್ಧಿ ಮತ್ತು ರೈತರ ಸೇವಾ ಸಮಿತಿ ಗ್ರಾಮ ಸಮೃದ್ಧಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ವತಿಯಿಂದ ಮೈಸೊರಿನ ಹೂಟಗಳ್ಳಿ ಯಲ್ಲಿರುವ ಕೃಷ್ಣ ಬೇಕರಿ ಆವರಣದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಮ್ಮಿಕೊಳ್ಳಲಾಯಿತು.
ಯೋಗ ನರಸಿಂಹಸ್ವಾಮಿ ದೇವಸ್ಥಾನದ ಆಡಳಿತಾಧಿಕಾರಿಗಳಾದ ಶ್ರೀ ಶ್ರೀನಿವಾಸ ಗುರುಗಳು ಆಗಮಿಸಿ ಕಾರ್ಯಕ್ರಮಕ್ಕೆ ದೀಪ ಬೆಳಗುವ ಮೂಲಕ ಚಾಲನೆ ನೀಡಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಲಲಿತಾ ಜಿ.ಟಿ.ದೇವೇಗೌಡ, ಚಂದ್ರಿಕಾ ಸುರೇಶ್,ಭಾಗ್ಯ ಲೋಕೇಶ್, ನಾಗರತ್ನ, ಭಾಗ್ಯ ಲೋಕೇಶ್, ಕೂರ್ಗಳ್ಳಿ ಮಹಾದಣ್ಣ, ನಗರ ಸಭೆ ಗಿರಿಜಾ ಅವರುಗಳನ್ನು ಸನ್ಮಾನಿಸಲಾಯಿತು.
ಹಾಗೂ 9 ಜನ ಸಾಧಕರನ್ನು ಗುರುತಿಸಿ ಸನ್ಮಾನಿಸಿ ಗೌರವಿಸಲಾಯಿತು. ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಎನ್. ಎಸ್. ಎಸ್ ಕ್ಯಾಂಪಿನ ಮಕ್ಕಳಿಗೆ ಅಭಿನಂದನಾ ಪತ್ರವನ್ನು ನೀಡಿ ಗೌರವಿಸಲಾಯಿತು.
ನಂತರ ಮುಖ್ಯ ಅತಿಥಿಗಳು ಸಂಸ್ಥೆಯ ಬಗ್ಗೆ ಮಾತನಾಡಿದರು. ಸಂಸ್ಥೆಯ ವತಿಯಿಂದ ಸಂಘಗಳ ರಚನೆ ಮಾಡಿ ಒಕ್ಕೂಟ ಮಾಡಿರುವ ಸಂಘಗಳ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳನ್ನು ಗೌರವಿಸಲಾಯಿತು.
ಆನಂತರ ಸಂಘಗಳಿಗೆ ಆಟೋಟ ಸ್ಪರ್ಧೆ ಗಳನ್ನು ಹಮ್ಮಿಕೊಂಡು ಗೆದ್ದ ಮಹಿಳೆಯರಿಗೆ ಬಹುಮಾನ ವಿತರಿಸಲಾಯಿತು.
ಪಂಚಾಯತ್ ಗ್ರಾಮಾಭಿವೃದ್ಧಿ ಮತ್ತು ರೈತರ ಸೇವಾ ಸಮಿತಿ ಹಾಗೂ ಗ್ರಾಮ ಸಮೃದ್ಧಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ನಿರ್ದೇಶಕರನ್ನು ಸನ್ಮಾನಿಸಿ ಗೌರವಿಸಲಾಯಿತು.
