ಮೈಸೂರು: ಮೈಸೂರಿನ ವಿವೇಕಾನಂದ ನಗರ ವೃತ್ತದಲ್ಲಿ ನಾಡಪ್ರಭು ಶ್ರೀ ಕೆಂಪೇಗೌಡರ 516ನೇ ಜಯಂತಿಯನ್ನು ಭಾನುವಾರ ಅದ್ದೂರಿಯಾಗಿ ಆಚರಿಸಲಾಯಿತು.

ಮೈಸೂರಿನ ಕುವೆಂಪು ನಗರ ಕಾಂಪ್ಲೆಕ್ಸ್ ನಿಂದ ಕಲಾತಂಡಗಳು ಹಾಗೂ ನಾಡಪ್ರಭು ಕೆಂಪೇಗೌಡರ ಪುತ್ಥಳಿಯೊಂದಿಗೆ ಹೊರಟ ಮೆರವಣಿಗೆ ಮೈಸೂರಿನ ಕುವೆಂಪು ನಗರ ಕಾಂಪ್ಲೆಕ್ಸ್, ಆಂಜನೇಯ ಸ್ವಾಮಿ ದೇವಸ್ಥಾನದಿಂದ ಅಪಾರ ಜನಸ್ತೋಮದೊಂದಿಗೆ ಹೊರಟು ವಿವೇಕಾನಂದ ವೃತ್ತದವರೆಗೆ ಅದ್ದೂರಿಯಾಗಿ ಸಾಗಿತು.
ಮಳೆಯ ನಡುವೆಯೂ ನಾಡಪ್ರಭು ಶ್ರೀ ಕೆಂಪೇಗೌಡರ 516 ನೇ ಜಯಂತಿ ಕಾರ್ಯಕ್ರಮವನ್ನು ಕೆ ಆರ್ ಕ್ಷೇತ್ರದ ಶಾಸಕರಾದ ಟಿ ಎಸ್ ಶ್ರೀವತ್ಸ, ಮಾಜಿ ಸಂಸದ ಪ್ರತಾಪ್ ಸಿಂಹ, ವಿಧಾನಪರಿಷತ್ ಸದಸ್ಯ ಮಂಜೇಗೌಡ, ರಾಜ್ಯ ಒಕ್ಕಲಿಗರ ಸಂಘದ ಕಾಮಗಾರಿ ಅಧ್ಯಕ್ಷ ಸಿ.ಜಿ ಗಂಗಾಧರ್, ಕೆ.ವಿ ಶ್ರೀಧರ್, ರವಿಕುಮಾರ್ ಅವರುಗಳು ದೀಪ ಬೆಳಗಿಸಿ ಉದ್ಘಾಟಿಸಿದರು.
ನಾಡಪ್ರಭು ಶ್ರೀ ಕೆಂಪೇಗೌಡರ ಜಯಂತಿಯ ಆಯೋಜಕರಾದ ಪೂಜಾ ಟೆಂಟ್ ನ ಲಿಂಗಪ್ಪ,ನಗರ ಪಾಲಿಕೆ ಮಾಜಿ ಸದಸ್ಯರಾದ ಮಾಯಾ ಜಗದೀಶ್, ಕರ್ನಾಟಕ ಸೇನಾ ಪಡೆಯ ಅಧ್ಯಕ್ಷ ತೇಜೇಶ್ ಲೋಕೇಶ್ ಗೌಡ, ಗಿರೀಶ್ ಗೌಡ, ಸುಮಿತ್ರಾ ರಮೇಶ್, ರಘುರಾಂ, ರಘು ಯೋಗೀಶ್, ಸುಬ್ಬೇಗೌಡ, ದರ್ಶನ್ ಗೌಡ, ಶಿವರಾಂ, ಸೇರಿದಂತೆ ಹಲವಾರು ಮುಖಂಡರುಗಳು ಪಾಲ್ಗೊಂಡಿದ್ದರು.
ಕಾರ್ಯಕ್ರಮದಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು,ಜತೆಗೆ ಸಂಜೆ ಕನ್ನಡ ರಸಮಂಜರಿ ಕಾರ್ಯಕ್ರಮ ಎಲ್ಲರನ್ನು ರಂಜಿಸಿತು.