ಮೈಸೂರು: ದಿನೇದಿನೆ ಚಿನ್ನ ಮತ್ತು ಬೆಳ್ಳಿ ದರ ಏರಿಕೆಯಿಂದ ಗ್ರಾಹಕರಿಗೆ ಹೊರೆ ಆಗುತ್ತಿದೆ ಶೇ.3ರಷ್ಟಿರುವ ಜಿಎಸ್ಟಿ ದರವನ್ನು ಶೇ.1ಕ್ಕೆ ಇಳಿಸಬೇಕೆಂದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ಉಪಾಧ್ಯಕ್ಷ ವಿಕ್ರಂ ಅಯ್ಯಂಗಾರ್ ಆಗ್ರಹಿಸಿದ್ದಾರೆ.
ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಜಿಎಸ್ಟಿ ದರ ಹೆಚ್ಚಳದಿಂದ ಚಿನ್ನ, ಬೆಳ್ಳಿ ಬೆಲೆ ಅಧಿಕವಾಗಿದೆ. ಇದರಿಂದ ಗ್ರಾಹಕರು ಹಾಗೂ ವ್ಯಾಪಾರಸ್ಥರಿಗೆ ತೊಂದರೆ ಆಗುತ್ತಿದೆ. ಸರ್ಕಾರಗಳು ಈ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
