ಕೊಳ್ಳೇಗಾಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಾದ ಗ್ಯಾರಂಟಿ ಯೋಜನೆಗಳು ಅನುಷ್ಠಾನ ಸಮಿತಿ ಮತ್ತು ಅಧಿಕಾರಿಗಳ ಮಾರ್ಗದರ್ಶನದಲ್ಲಿ ಸೂಕ್ತ ಫಲಾನುಭವಿ ಗಳಿಗೆ ತಲುಪುತ್ತಿದೆ ಎಂದು ಕೊಳ್ಳೇಗಾಲ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ತಾಲೂಕು ಘಟಕದ ಅಧ್ಯಕ್ಷ ಕುಂತೂರು ಮೋಳೆ ರಾಜೇಂದ್ರ ತಿಳಿಸಿದರು.
ಪಟ್ಟಣದ ತಾಲೂಕು ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ತಾಲೂಕು ಕಾರ್ಯ ನಿರ್ವಾಹಕ ಅಧಿಕಾರಿ ಯೊಂದಿಗೆ ಆಯೋಜಿಸಲಾಗಿದ್ದ ಗ್ಯಾರಂಟಿ ಯೋಜನೆಗಳು ಅನುಷ್ಠಾನದ ಸಭೆಯಲ್ಲಿ ಅವರು ಮಾತನಾಡಿದರು.

ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಶಕ್ತಿ ಯೋಜನೆ, ಗೃಹಲಕ್ಷ್ಮಿ, ಯುವನಿಧಿ ಹಾಗೂ ಗೃಹಜೋತಿ ಯೋಜನೆಗಳು ಯಾವುದೇ ರೀತಿಯ ಗೊಂದಲಗಳಿಲ್ಲದೆ ಫಲಾನುಭವಿಗಳಿಗೆ ತಲುಪುತ್ತಿದೆ. ಇದರಿಂದ ಜನರ ಜೀವನ ಮಟ್ಟ ಸುಧಾರಿಸುತ್ತಿದೆ. ಎಂದು ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗುತ್ತಿದೆ ಎಂದು ತಿಳಿಸಿದರು.
ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಪಡಿತರ ಚೀಟಿದಾರರಿಗೆ 10 ಕೆ.ಜಿ ಅಕ್ಕಿ
ನೀಡುತ್ತಿದ್ದು ಬಿಪಿಎಲ್ ಹಾಗೂ ಅಂತ್ಯೋದಯ ಪಡಿತರ ಚೀಟಿಗಳಿಗೆ ನೀಡುವ ಪಡಿತರಗಳ ಬಗ್ಗೆ ಮಾಹಿತಿ ಇರುವ ಬೋರ್ಡ್ ನ್ನು ಪ್ರತಿ ನ್ಯಾಯಬೆಲೆ ಅಂಗಡಿಗಳಲ್ಲಿ ಪ್ರದರ್ಶನ ಫಲಕ ಹಾಕಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಗ್ಯಾರಂಟಿ ಯೋಜನೆಯಿಂದ ಅರ್ಹ ಫಲಾನುಭವಿಗಳು ವಂಚಿತರಾಗಬಾರದು ಎಂಬುದು ಸರ್ಕಾರದ ಆಶಯವಾಗಿದೆ ಎಂದು ರಾಜೇಂದ್ರ ಮೋಳೆ ತಿಳಿಸಿದರು.
ಇದಕ್ಕೂ ಮುನ್ನ ಗ್ಯಾರಂಟಿ ಯೋಜನೆಗಳ ಸಮಿತಿ ಪ್ರಗತಿ ಕುರಿತು ಚರ್ಚೆ ಸೇರಿದಂತೆ ಅನುಸರಿಸಬೇಕಾದ ಕ್ರಮ, ಅಗತ್ಯ ವ್ಯವಸ್ಥೆ ಹಾಗೂ ರುಪುರೇಷಗಳ ಬಗ್ಗೆ ಸದಸ್ಯರು, ಅಧಿಕಾರಿಗಳು ಮಾಹಿತಿ ಹಂಚಿಕೊಂಡರು.

ಸಭೆಯಲ್ಲಿ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರುಗಳಾದ ಸಿಲ್ಕಲ್ ಪುರ ಶಾಂತರಾಜು, ರಾಜುಗೌಡ , ಶ್ರೀನಿವಾಸ, ಮೂರ್ತಿ, ನಾರಾಯಣ, ಶಿವಕುಮಾರ, ಹರ್ಷ ಲಿಂಗರಾಜು, ಕೃಷ್ಣವೇಣಿ, ನಿರಂಜನ್, ಮಜ್ ಉಲ್ಲಾ, ಸಿಗ್ನತ್ ಬಾಬು, ಪರಮೇಶ್ ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಪಟ್ಟ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.