ಮೈಸೂರು: ಕೆ ಆರ್ ಕ್ಷೇತ್ರದ ಹಿರಿಯ ಸಮಾಜ ಸೇವಕರು ಮೂಡ ಮಾಜಿ ಅಧ್ಯಕ್ಷರಾದ ಹೆಚ್ ವಿ. ರಾಜೀವ್ ಅವರ ಹುಟ್ಟು ಹಬ್ಬದ ಪ್ರಯುಕ್ತ ರಾಜೀವ್ ಸ್ನೇಹ ಬಳಗದ ವತಿಯಿಂದ ಸೆ.16 ರಂದು ಬೃಹತ್ ಉಚಿತ ಆರೋಗ್ಯ ಶಿಬಿರ ಏರ್ಪಡಿಸಲಾಗಿದೆ.
ಸೆ.16 ಬುಧವಾರ ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಭೂತಾಳೆ ಮೈದಾನ ವಿದ್ಯಾರಣ್ಯಪುರಂ ನಲ್ಲಿ ಬೃಹತ್ ಉಚಿತ ಆರೋಗ್ಯ ಶಿಬಿರವನ್ನು ಏರ್ಪಡಿಸಲಾಗಿದೆ.
ಈ ಕಾರ್ಯಕ್ರಮವನ್ನು ಪ್ಯಾರಾ ಅಂತರಾಷ್ಟ್ರೀಯ ಕ್ರೀಡಾಪಟು, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರು ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತರು, ಅಂಗವಿಕಲ ವ್ಯಕ್ತಿಗಳ ಅಧಿನಿಯಮ ಮಾಜಿ ರಾಜ್ಯ ಆಯುಕ್ತರಾದ ಕೆ. ಎಸ್. ರಾಜಣ್ಣ ಅವರು ಉದ್ಘಾಟಿಸಲಿದ್ದಾರೆ.
ಈ ಹಿನ್ನೆಲೆಯಲ್ಲಿ ಅವರನ್ನು ಆತ್ಮೀಯವಾಗಿ ರಾಜೀವ್ ಸ್ನೇಹ ಬಳಗದ ವತಿಯಿಂದ ಸನ್ಮಾನಿಸಿ ಈ ಬೃಹತ್ ಕಾರ್ಯಕ್ರಮವನ್ನು ಉದ್ಘಾಟಿಸಲು ಆಹ್ವಾನಿಸಲಾಯಿತು.
ಈ ಸಂದರ್ಭದಲ್ಲಿ ರಾಜೀವ್ ಸ್ನೇಹ ಬಳಗದ ಟಿಂಬರ್ ನಾಗರಾಜು, ರವಿತೇಜ, ಹರೀಶ್ ಅರಸ್, ನಟರಾಜ್ ಮುಂತಾದವರು ಹಾಜರಿದ್ದರು.
