ಹನೂರು: ಅಮಾವಾಸ್ಯೆ ಪೂಜೆ ಮುಗಿಸಿ ವಾಪಸಾಗುತ್ತಿದ್ದ ಭಕ್ತರಿದ್ದ ಕಾರು ಮುಂದೆ ಹೋಗುತ್ತಿದ್ದ ಪಿಕಪ್ ವಾಹನಕ್ಕೆ ಡಿಕ್ಕಿ ಹೊಡೆದು ಕಾರ್ ಮುಂಭಾಗ ಛಿದ್ರವಾದರೂ ಅದೃಷ್ಟ ವಧಾತ್ ಅದರಲ್ಲಿದ್ದವರು ಅಪಾಯದಿಂದ ಪಾರಾಗಿರುವ ಘಟನೆ ಹನೂರು ತಾಲೂಕು, ಎಲ್ಲೇಮಾಳ ಗ್ರಾಮದ ಬಳಿ ಬೆಳಿಗ್ಗೆ ಸಂಭವಿಸಿದೆ.
ಅಮಾವಾಸ್ಯೆಯ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಶ್ರೀ ಮಲೈ ಮಹದೇಶ್ವರ ಬೆಟ್ಟಕ್ಕೆ ತೆರಳಿದ್ದ ಭಕ್ತರು, ಪೂಜೆ ಮುಗಿಸಿಕೊಂಡು ಕಾರಿನಲ್ಲಿ ಬೆಂಗಳೂರಿಗೆ ವಾಪಸಾಗುತ್ತಿದ್ದರು.
ಈ ವೇಳೆ ಎಲ್ಲೇಮಾಳ ಗ್ರಾಮದ ಬಳಿ ರಸ್ತೆ ಹಂಪ್ ಇದ್ದ ಕಾರಣ, ಮಾರ್ಟಳ್ಳಿ ಗ್ರಾಮಕ್ಕೆ ಸೇರಿದ ಮಹೇಂದ್ರ ಪಿಕಪ್ ವಾಹನದ ಚಾಲಕ ತನ್ನ ವಾಹನದ ವೇಗವನ್ನು ಕಡಿಮೆ ಮಾಡಿದ್ದಾನೆ.
ಅದೇ ಸಮಯದಲ್ಲಿ ಹಿಂಬದಿಯಿಂದ ವೇಗವಾಗಿ ಬಂದ ಭಕ್ತರ ಕಾರು ಪಿಕಪ್ ವಾಹನಕ್ಕೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ,ಆದರೆ ಅದರಲ್ಲಿದ್ದ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಅಪಘಾತ ಸಂಭವಿಸಿದ ವೇಳೆ ಕಾರಿನಲ್ಲಿ ನಾಲ್ವರು ಪ್ರಯಾಣಿಕರಿದ್ದರು. ಅದೃಷ್ಟವಶಾತ್ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದೆ.
ಸ್ಥಳಕ್ಕೆ ಹನೂರು ಠಾಣೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ, ಮುಂದಿನ ಕ್ರಮ ಕೈಗೊಂಡಿದ್ದಾರೆ.
