ಮೈಸೂರು: ಹಿನಕಲ್ ಕೈಗಾರಿಕಾ ಪ್ರದೇಶದ ಖಾಸಗಿ ಕಂಪನಿಯೊಂದರ ಲೇಡಿ ಸೂಪರ್ವೈಸರ್ ಕಿರುಕುಳ ನೀಡಿದ್ದಕ್ಕೆ ಮನನೊಂದು ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಮೈಸೂರಿನ ಹಿನಕಲ್ನಲ್ಲಿರುವ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ನಾಗೇಶ್ವರಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ
ಆತ್ಮಹತ್ಯೆಗೂ ಮುನ್ನ ಆಕೆ ಡೆತ್ನೋಟ್ ಬರೆದಿಟ್ಟಿದ್ದು, ಅದರಲ್ಲಿ ಡಾಲಿ ಮೇಡಂ ಕಿರುಕುಳಕ್ಕೆ ಮನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ನನ್ನ ಸಾವಿಗೆ ನ್ಯಾಯ ಕೊಡಿಸಿ ಎಂದು ಬರೆದಿದ್ದಾರೆ ಎಂದು ಗೊತ್ತಾಗಿದೆ.
ಡಾಲಿ ಎಂಬವರು ಕೆಲಸದ ವಿಚಾರದಲ್ಲಿ ನಿರಂತರ ಮಾನಸಿಕ ಕಿರುಕುಳ ನೀಡುತ್ತಿದ್ದರು ಎಂದು ನಾಗೇಶ್ವರಿ ಅವರು ಡೆತ್ನೋಟ್ನಲ್ಲಿ ಉಲ್ಲೇಖಿಸಿದ್ದು,ಈ ನೋವು ತಾಳಲಾರದೆ ಅವರು ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಘಟನೆ ಸಂಬಂಧ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಡೆತ್ನೋಟ್ ಮತ್ತು ಸಂಬಂಧಪಟ್ಟ ದಾಖಲೆಗಳನ್ನು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ.
