ಹಾಸನ: ಸಾಲದ ಒತ್ತಡ ಮತ್ತು ಸಾಲಗಾರರ ಕಿರುಕುಳದಿಂದ ಬೇಸತ್ತು ಸೆಲ್ಪಿ ವೀಡಿಯೋ ಮಾಡಿ ವಿಷ ಸೇವಿಸಿದ್ದ ವ್ಯಕ್ತಿ ಸಾವನ್ನಪ್ಪಿದ್ದಾರೆ.
ಬೆಂಗಳೂರಿನ ನೆಲಮಂಗಲ ಮೂಲದ ಕೃಷ್ಣಪ್ಪ (47) ಆತ್ಮಹತ್ಯೆ ಮಾಡಿಕೊಂಡವರು.
ಕೃಷ್ಣಪ್ಪ ಕಳೆದ ಹಲವು ವರ್ಷಗಳಿಂದ ಪತ್ನಿ ಹಾಗೂ ಮಕ್ಕಳೊಂದಿಗೆ ಹಾಸನ ನಗರದಲ್ಲಿ ನೆಲೆಸಿದ್ದರು.
ಸಾಲದ ವಿಚಾರವಾಗಿ ನಿರಂತರ ಕಿರುಕುಳ ಅನುಭವಿಸುತ್ತಿದ್ದೇನೆ ಎಂದು ನೊಂದು ಅವರು ಮೊಬೈಲ್ ನಲ್ಲಿ ಸೆಲ್ಫಿ ವಿಡಿಯೋ ಮಾಡಿ ವಿಷ ಸೇವಿಸಿದ್ದರು ಎಂದು ತಿಳಿದುಬಂದಿದೆ.
ಚಿಕಿತ್ಸೆ ಫಲಿಸದೆ ಕೃಷ್ಣಪ್ಪ ಮಂಗಳವಾರ ಮೃತಪಟ್ಟಿದ್ದಾರೆ.
