ಚಾಮರಾಜನಗರ: ಕಾಡು ಪ್ರಾಣಿಯನ್ನು ಬೇಟೆಯಾಡಲು ಆಕ್ರಮವಾಗಿ ನಾಡ ಬಂದೂಕುಗಳನ್ನು ಹೊಂದಿದ್ದ ವ್ಯಕ್ತಿಗಳನ್ನು ತೆರಕಣಾಂಬಿ ಪೊಲೀಸರು ಬಂಧಿಸಿದ್ದಾರೆ.
ಕೂಡುಗು ಜಿಲ್ಲೆ,ಸೋಮವಾರಪೇಟೆಯ ಕೂಗೂರು ಗ್ರಾಮದ
ಕುಮಾರಪ್ಪ,ಸುನೀಲ್,ದಿನೇಶ್, ಕಾಂತ
ಬಂಧಿತ ಆರೋಪಿಗಳು.
ತೆರಕಣಾಂಬಿ ಪೊಲೀಸ್ ಠಾಣೆ ಆರಕ್ಷಕ ಉಪ ನಿರೀಕ್ಷಕರಾದ ಜವರೇಗೌಡ ಅವರು ಸಿಬ್ಬಂದಿಯೊಂದಿಗೆ ಪೊಲೀಸ್ ಠಾಣೆ ಮುಂಭಾಗ ವಾಹನ ತಪಾಸಣೆ ಮಾಡುತ್ತಿದ್ದಾಗ ಬಂದ ಮಾರುತಿ ಓಮಿನಿ ಕಾರನ್ನು (ಕೆ.ಎ-12-ಪಿ-7106) ತಡೆದು ಪರಿಶೀಲಿಸಿದಾಗ ಕಾಡು ಪ್ರಾಣಿಗಳನ್ನು ಬೇಟೆಯಾಡಲು ಬಳಸುತ್ತಿದ್ದ ಸಲಕರಣೆಗಳು ಪತ್ತೆಯಾಗಿದೆ.
ಆರೋಪಿಗಳಿಂದ ಎರಡು ಒಂಟಿ ನಳಿಕೆ ಬಂದೂಕು,ಒಂದು ನಾಡ ಬಂದೂಕು, ಪ್ಲಾಸ್ಟಿಕ್ ಕವರ್ನಲ್ಲಿದ್ದ 18 ಕಾರ್ಟಜ್ ಗುಂಡುಗಳು, ಎರಡು ಕಬ್ಬಿಣದ ಚಾಕುಗಳು ಹಾಗೂ ವಾಹನವನ್ನು ವಶಪಡಿಸಿಕೊಂಡಿದ್ದಾರೆ.
ತೆರಕಣಾಂಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಳ್ಳಲಾಗಿದೆ.
ಈ ಪತ್ತೆ ಕಾರ್ಯಕ್ಕೆ ಪೊಲೀಸ್ ಅಧೀಕ್ಷಕರಾದ ಮುತ್ತುರಾಜು.ಎಂ ಅವರು ಪ್ರಶಂಸನೆ ವ್ಯಕ್ತಪಡಿಸಿ, ಮುಂದಿನ ದಿನಗಳಲ್ಲಿಯೂ ಸಹ ಇನ್ನೂ ಹೆಚ್ಚಿನ ಅಕ್ರಮಗಳನ್ನು ಪತ್ತೆ ಹಚ್ಚಿ ನಿಗ್ರಹಿಸುವಂತೆ ಸೂಚಿಸಿದ್ದಾರೆ.
