ಮೈಸೂರು: ಇಂದಿನ ಸ್ಥಿತಿಗತಿಯಲ್ಲಿ ಪ್ರತಿ ಆರು ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ಮಾಡಿಕೊಳ್ಳುವುದು ಅನಿವಾರ್ಯವಾಗಿದೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ ಹೇಳಿದರು.
ಧರ್ಮ ಪ್ರಕಾಶ್ ರಾವ್ ಬಹುದ್ದೂರ್ ಡಿ ಬನುಮಯ್ಯ ಅವರ 166 ನೇ ಜಯಂತಿ ಅಂಗವಾಗಿ ಹಮ್ಮಿಕೊಂಡಿರುವ ಉಚಿತ ಆರೋಗ್ಯ ತಪಾಸಣೆ ಮತ್ತಿತರ ಸಾಮಾಜಿಕ ಕಾರ್ಯಗಳ ಪ್ರಚಾರ ಸಾಮಗ್ರಿಗಳನ್ನು
ಕೆ ಆರ್ ಮೊಹಲಾದಲ್ಲಿರುವ ಶ್ರೀ ಕೊಲ್ಲಾಪುರದ ಮಹಾಲಕ್ಷ್ಮಿ ದೇವಸ್ಥಾನದ ಬಳಿ ಬಿಡುಗಡೆಗೊಳಿಸಿ ಅವರು ಮಾತನಾಡಿದರು.
ದೇಶ ವಿದೇಶಗಳಿಂದ ಅತೀ ವೇಗವಾಗಿ ಹರಡುವ ನಾನಾ ವೈರಸ್ಗಳೂ ಪತ್ತೆಯಾಗಿವೆ. ಪ್ರಕೃತಿಯ ಏರುಪೇರುಗಳಿಂದ ಶರೀರಕ್ಕೆ ನಾನಾ ಕಾಯಿಲೆ ಗಳು ಬರುತ್ತವೆ. ದೇಹವನ್ನು ಕಾಪಾಡುವುದರ ಜೊತೆಗೆ ಪ್ರಕೃತಿಯನ್ನು ಸಮತೋಲನದಲ್ಲಿ ಇಟ್ಟುಕೊಳ್ಳುವುದು ನಮ್ಮ ಗುರುತರ ಜವಾಬ್ದಾರಿಯೂ ಆಗಿದೆ. ಗೊತ್ತಿಲ್ಲದ ಕಾಯಿಲೆಗಳ ಪತ್ತೆಗೆ ಸಾರ್ವಜನಿಕ ಉಚಿತ ಆರೋಗ್ಯ ತಪಾಸಣಾ ಶಿಬಿರಗಳು ಸಹಕಾರಿ ಎಂದು ಹೇಳಿದರು.
ಧರ್ಮ ಪ್ರಕಾಶ್ ರಾವ್ ಬಹುದ್ದೂರ್ ಡಿ ಬನುಮಯ್ಯ ಯುವ ಬ್ರಿಗೇಡ್ ವತಿಯಿಂದ ಡಿ ಬನುಮಯ್ಯ ಅವರ 166 ನೇ ಜಯಂತಿ ಅಂಗವಾಗಿ ಜುಲೈ 5 ರಂದು ಮಧ್ಯಾಹ್ನ 12 ಗಂಟೆಗೆ ಡಿ ಬನುಮಯ್ಯ ಕಾಲೇಜಿನ ಆವರಣದಲ್ಲಿ ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ.
ಇದೇ ವೇಳೆ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು
ಹಮ್ಮಿಕೊಳ್ಳಲಾಗಿದೆ.
ನವನೀತ್ ನೇತ್ರಾಲಯ ವತಿಯಿಂದ ಕಣ್ಣಿನ ತಪಾಸಣೆ ಶಿಬಿರ, ಸುಯೋಗ ಮಲ್ಟಿ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಜೀವದಾರ ರಕ್ತ ನಿಧಿ ಕೇಂದ್ರದ ಸಹಯೋಗದೊಂದಿಗೆ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ.
ಈ ಸಂದರ್ಭದಲ್ಲಿ ಪ್ರದೀಪ್ ಕುಮಾರ್, ರವಿ, ದೀಪಕ್, ಸುರೇಶ್, ಶಿವಣ್ಣ, ಪ್ರಕಾಶ್, ಭಾರತಿ, ಮಹಾಲಕ್ಷ್ಮಿ, ಹೇಮಾ, ತಾಯಮ್ಮ ಮತ್ತಿತರರು ಹಾಜರಿದ್ದರು.
