ಮೈಸೂರು: ಮೈಸೂರಿನ
ಪಿ ಜಿ ಆರ್ ಎಸ್ ಎಸ್ ಸಂಸ್ಥೆ, ಪೂಜಾಬಾಗವತ್ ಸ್ನಾತಕೋತ್ತರ ಕೇಂದ್ರ ಹಾಗೂ ನಾರಾಯಣ ಆಸ್ಪತ್ರೆ ಸಹಯೋಗದಲ್ಲಿ ಹೃದಯ ಸಂಬಂದಿ ಆರೋಗ್ಯದ ಬಗ್ಗೆ ಶಿಬಿರ ಹಮ್ಮಿಕೊಳ್ಳಲಾಯಿತು.
ಹೃದಯ ಕಾಯಿಲೆಗಳು ಹಾಗೂ ಹೃದಯದ ಆರೋಗ್ಯದ ಬಗ್ಗೆ ಯುವಕ ಯುವತಿಯರಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ಪೂಜಾಬಾಗವತ್ ಸ್ನಾತಕೋತ್ತರ ಕೇಂದ್ರದಲ್ಲಿ ಶುಕ್ರವಾರ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಕಾರ್ಯಕ್ರಮವನ್ನು ಗಿಡಗಳಿಗೆ ನೀರುಣಿಸುವ ಮುಖಾಂತರ ಉದ್ಘಾಟಿಸಲಾಯಿತು.
ಕಾರ್ಯಕ್ರಮವನ್ನು , ಪಿ ಜಿ ಆರ್ ಎಸ್ ಎಸ್ ಸಂಸ್ಥೆಯ ರಾಜ್ಯಾಧ್ಯಕ್ಷ ಯಾದವ ಹರೀಶ ಹೆಚ್ ಎ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು,ಇಂತಹ ಶಿಬಿರ ಗಳನ್ನು ಸಾರ್ವಜನಿಕರು ಸದುಪಯೋಗ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಕಾರ್ಯದರ್ಶಿ ವಿ ರವೀಂದ್ರ ಪ್ರಾಸ್ತಾವಿಕವಾಗಿ ಮಾತನಾಡಿದರು. ರಕ್ತದಾನಿ ಮಂಜು ರಕ್ತದಾನದ ಬಗ್ಗೆ ಅರಿವು ಮೂಡಿಸಿದರು.

ಕಾರ್ಯಕ್ರಮದಲ್ಲಿ ನಾರಾಯಣ ಆಸ್ಪತ್ರೆಯ
ಡಾ. ಗುಲ್ಜಾರ್, ಸಮಾಜಶಾಸ್ತ್ರ ವಿಭಾಗದ ಡಾ. ಭಾವನಾ ಮತ್ತಿತರರು ಪಾಲ್ಗೊಂಡಿದ್ದರು.