ಸತತ ಮಳೆಗೆ ತತ್ತರಿಸಿದ ಉತ್ತರಾಖಂಡ್

Spread the love

ಡೆಹ್ರಾಡೂನ್​: ಉತ್ತರಾಖಂಡ್​ನಲ್ಲಿ ಕಳೆದ 48 ಗಂಟೆಗಳಿಂದ ಒಂದೇ ಸಮನೆ ಮಳೆ ಸುರಿಯುತ್ತಿದ್ದು ಬಹಳಷ್ಟು ರಸ್ತೆಗಳು ಬಂದ್ ಆಗಿವೆ.

ಗುಡ್ಡಗಾಡು ಪ್ರದೇಶದಲ್ಲಿ ಮಳೆಯಿಂದ ಹೆದ್ದಾರಿ, ಗಡಿ ರಸ್ತೆಗಳು ಸೇರಿದಂತೆ 24 ರಸ್ತೆಗಳು ಸಂಪೂರ್ಣ ಹಾಳಾಗಿದ್ದು ಸಂಚಾರ ಬಂದ್​ ಆಗವೆ,ಹಾಗಾಗಿ ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಮಳೆ ನಿರಂತರವಾಗಿ ಸುರಿಯುತ್ತಿರುವುದರಿಂದ ಗುಡ್ಡ ಕುಸಿತ ಸೇರಿದಂತೆ ಅನೇಕ ನೈಸರ್ಗಿಕ ವಿಪತ್ತುಗಳು ಸಂಭವಿಸಿದೆ. ಇದರಿದಾಗಿ 18 ಜನರು ಸಾವನ್ನಪ್ಪಿದ್ದು, ಇಬ್ಬರು ಕಣ್ಮರೆಯಾಗಿದ್ದಾರೆ.

ಗುಡ್ಡಗಾಡು ಪ್ರದೇಶದಲ್ಲಿ ಸಂಭವಿಸಿದ ನೈಸರ್ಗಿಕ ವಿಪತ್ತಿನ ನಿರ್ವಹಣೆ ಸಂಬಂಧ ಮುಖ್ಯ ಮಂತ್ರಿ ಪುಷ್ಕರ್​ ಸಿಂಗ್​ ಧಾಮಿ ವಿಪತ್ತು ನಿರ್ವಹಣಾ ಇಲಾಖೆ ಅಧಿಕಾರಿಗಳೊಂದಿಗೆ ಹಲವು ಸುತ್ತಿನ ಸಭೆ ನಡೆಸಿದ್ದಾರೆ.

ಮಳೆ ಹೀಗೇ ಮುಂದುವರೆದರೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಲಿದೆ,ಹಾಗಾಗಿ ತಕ್ಷಣವೇ ರಕ್ಷಣೆ ಮತ್ತು ಪರಿಹಾರ ಕಾರ್ಯ ಕೈಗೊಳ್ಳುವಂತೆ ಸೂಚಿಸಿದ್ದಾರೆ‌

ನೈಸರ್ಗಿಕ ವಿಪತ್ತಿನಿಂದ ಜೂನ್​ 1ರಿಂದ ಜೂನ್​ 23ರ ನಡುವೆ 18 ಮಂದಿ ಸಾವನ್ನಪ್ಪಿದ್ದು, 8 ಮಂದಿ ಗಾಯಗೊಂಡಿದ್ದಾರೆ, ಇಬ್ಬರು ನಾಪತ್ತೆಯಾಗಿದ್ದಾರೆ.

ರಸ್ತೆ ಅಪಘಾತದಲ್ಲಿ ನೂನ್​ 1ರಿಂದ 23ರ ವರೆಗೆ 28 ಮಂದಿ ಸಾವನ್ನಪ್ಪಿದ್ದು, 128 ಮಂದಿ ಗಾಯಗೊಂಡಿದ್ದಾರೆ. ಚಾರ್​ಧಾಮ್​ ಯಾತ್ರೆಯಲ್ಲಿ 142 ಯಾತ್ರಾರ್ಥಿಗಳು ಸಾವನ್ನಪ್ಪಿದ್ದಾರೆ.

ಭಗೇಶ್ವರ ಜಿಲ್ಲೆ ಸೇರಿದಂತೆ ಹಲವು ಕಡೆ ಭಾರೀ ಮಳೆಯಿಂದಾಗಿ ಆರೇಂಜ್​ ಅಲರ್ಟ್​ ಘೋಷಣೆ ಮಾಡಲಾಗಿದ್ದು, ಡೆಹ್ರಾಡೂನ್​, ನೈನಿತಾಲ್​ ಮತ್ತು ರುದ್ರಪ್ರಯಾಗ್​ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್​ ಘೋಷಣೆ ಮಾಡಲಾಗಿದೆ.

​​