ಹಿಮಾಚಲ ಪ್ರದೇಶ: ಹಿಮಾಚಲ ಪ್ರದೇಶದ ಬಿಲಾಸ್ಪುರ್ ಜಿಲ್ಲೆಯ ಝಂಡುತಾ ಉಪವಿಭಾಗದ ಬಾಲುಘಾಟ್ ಪ್ರದೇಶದಲ್ಲಿ ಸಂಭವಿಸಿದ ಭಾರಿ ಭೂಕುಸಿತದಿಂದ ಖಾಸಗಿ ಬಸ್ ಮೇಲೆ ಬಂಡೆಗಳು ಉರುಳಿ ಹದಿನೆಂಟು ಮಂದಿ ಮೃತಪಟ್ಟಿದ್ದಾರೆ.
ಭೂಕುಸಿತದ ನಂತರ ಖಾಸಗಿ ಬಸ್ ಮೇಲೆ ಬಂಡೆಗಳು ಮತ್ತು ಮಣ್ಣಿನಿಂದ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದು, ಹಲವರು ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ರಕ್ಷಣಾ ಕಾರ್ಯ ಭರದಿಂದ ಸಾಗಿದೆ.
ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ಅಮಿತ್ ಶಾ ಸೇರಿದಂತೆ ಹಲವು ನಾಯಕರು ದುಃಖ ವ್ಯಕ್ತಪಡಿಸಿದ್ದಾರೆ.
ಮೃತರ ಕುಟುಂಬಗಳಿಗೆ 2 ಲಕ್ಷ ಮತ್ತು ಗಾಯಗೊಂಡವರಿಗೆ 50,000 ಪರಿಹಾರವನ್ನು ಪ್ರಧಾನಿ ಮೋದಿ ಘೋಷಿಸಿದ್ದಾರೆ.
ರಕ್ಷಣಾ ಕಾರ್ಯಾಚರಣೆಗಾಗಿ ಜಿಲ್ಲಾಡಳಿತ ತಂಡಗಳು ಘಟನಾ ಸ್ಥಳಕ್ಕೆ ತಲುಪಿವೆ. ಸಂಪೂರ್ಣ ಯಂತ್ರೋಪಕರಣಗಳನ್ನು ನಿಯೋಜಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ರಾಜ್ಯ ರಾಜಧಾನಿ ಶಿಮ್ಲಾದಿಂದ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು, ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ತ್ವರಿತಗೊಳಿಸುವಂತೆ ಸ್ಥಳೀಯ ಆಡಳಿತಕ್ಕೆ ನಿರ್ದೇಶನ ನೀಡಿದ್ದಾರೆ.