ನಂಜನಗೂಡು: ನಂಜನಗೂಡು ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು ವತಿಯಿಂದ ನ್ಯಾಯಾಧೀಶರಾಗಿ ಆಯ್ಕೆಯಾದ ರಮ್ಯಾ ಆರ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ರಮ್ಯ ಅವರು ಮೈಸೂರು ಜಿಲ್ಲೆ, ನಂಜನಗೂಡು ತಾಲ್ಲೂಕಿನ ಕಿರಗುಂದ ಗ್ರಾಮದ ರಾಜೇಂದ್ರ ಪ್ರಸಾದ್ ಎಂ.ಡಿ(ಜಾನಪದ ಕಲಾವಿದರು )
ಪಾರ್ವತಮ್ಮ ಎನ್ ದಂಪತಿಯ ಪುತ್ರಿ.
ಗ್ರಾಮೀಣ ಕುಟುಂಬದಲ್ಲಿ ಜನಿಸಿದ ಅವರು, ಬಾಲ್ಯದಿಂದಲೇ ವಿದ್ಯಾಭ್ಯಾಸದತ್ತ ಹೆಚ್ಚಿನ ಆಸಕ್ತಿ ತೋರಿದರು. ಪ್ರಾಥಮಿಕ ಶಿಕ್ಷಣವನ್ನು ಸ. ಹಿ. ಪ್ರಾ ಶಾಲೆ, ಕಿರುಗುಂದ ಮತ್ತು ಪ್ರೌಢಶಿಕ್ಷಣವನ್ನು ಶ್ರೀ ಮೊರಾರ್ಜಿ ದೇಸಾಯಿ ರೆಸಿಡೆನ್ಸಿಯಲ್ ಸ್ಕೂಲ್, ಹೊಸಕೋಟೆ , ಪಿ ಯು ಸಿ ಮೈಸೂರಿನ ಮಹಾರಾಣಿ ಕಾಲೇಜಿನಲ್ಲಿ ಮುಗಿಸಿದ್ದಾರೆ.
ನಂತರ ಕಾನೂನು ಪದವಿಯನ್ನು ಮಹಾಜನ ಕಾನೂನು ಕಾಲೇಜು ಮತ್ತು ಎಲ್ ಎಲ್ ಎಂ ಪದವಿಯನ್ನು ಮಾನಸ ಗಂಗೋತ್ರಿಯಲ್ಲಿ ಮುಗಿಸಿ ನ್ಯಾಯಧಿಶರಾಗಬೇಕೆಂಬ ಗುರಿಯನ್ನು ಇಟ್ಟುಕೊಂಡು ಛಲದಿಂದ ಶ್ರಮುಸಿ,ಈಗ ನ್ಯಾಯಾಧೀಶರಾಗಿ ಆಯ್ಕೆಯಾಗುವ ಮೂಲಕ ತಮ್ಮ ಕನಸನ್ನು ನನಸು ಮಾಡಿದ್ದಾರೆ.
ಬಾಲಕರ ಸ ಪ ಪೂ ಕಾಲೇಜಿನಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ರಮ್ಯಾ ಅವರು, ಈ ಸಾಧನೆ ಕೇವಲ ವೈಯಕ್ತಿಕ ಯಶಸ್ಸಲ್ಲ ಸಮಾಜದಲ್ಲಿನ ಎಲ್ಲಾ ಮಹಿಳೆಯರಿಗೂ ಪ್ರೇರಣೆಯಾಗಿದೆ ಎಂದು ಹೇಳಿದರು.
ಮಹಿಳೆಯರು ಯಾವ ಕ್ಷೇತ್ರದಲ್ಲಾದರೂ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಬಹುದು ಎಂಬುದಕ್ಕೆ ಇದು ಸ್ಪಷ್ಟ ಉದಾಹರಣೆಯಾಗಿದೆ.
ವಿಶೇಷವಾಗಿ ಗ್ರಾಮೀಣ ಭಾಗದ ವಿದ್ಯಾರ್ಥಿನಿಯರಿಗೆ ಇದು ಒಂದು ಮಾದರಿಯಾಗಿದೆ ಎಂದು ಹೇಳಿದರು.
ಶಿಕ್ಷಕರು ಮತ್ತು ಉಪನ್ಯಾಸಕರ ಸಲಹೆ,ಮಾರ್ಗದರ್ಶನ ಈ ಹಂತ ತಲುಪಲು ಸಾದ್ಯ ಎಂದು ಕೃತಜ್ಞತೆ ಸಲ್ಲಿಸಿದರು.
ಕಾಲೇಜಿನ ಪ್ರಾಂಶುಪಾಲರಾದ ಸಿ.ಆರ್.ದಿನೇಶ್ ರವರು ಮಾತನಾಡಿ, ಇಂತಹ ಸಾಧನೆಗಳು ಸಮಾಜದಲ್ಲಿ ಮಹಿಳಾ ಸಬಲೀಕರಣಕ್ಕೆ ಬಲ ತುಂಬುತ್ತವೆ. ಯುವತಿಯರು ಉನ್ನತ ಹುದ್ದೆಗಳನ್ನು ಅಲಂಕರಿಸುವ ಮೂಲಕ ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆ ತರಲು ಸಾಧ್ಯ ಎಂದು ಹೇಳಿದರು.
ನ್ಯಾಯಾಂಗ ಕ್ಷೇತ್ರದಲ್ಲಿ ಮಹಿಳೆಯರ ಪ್ರಮಾಣ ಹೆಚ್ಚುತ್ತಿರುವುದು ಸಮಾನತೆಯ ದಿಕ್ಕಿನಲ್ಲಿ ದೊಡ್ಡ ಹೆಜ್ಜೆಯಾಗಿದೆ.ರಮ್ಯಾ ಅವರ ಈ ಸಾಧನೆ ನ್ಯಾಯ ವ್ಯವಸ್ಥೆಯಲ್ಲಿ ಮಹಿಳೆಯರ ಪಾತ್ರವನ್ನು ಮತ್ತಷ್ಟು ಬಲಪಡಿಸುವಂತಾಗಿದೆ ಎಂದು ತಿಳಿಸಿದರು.
ಕಾಲೇಜಿನ ಉಪನ್ಯಾಸಕರಾದ ಡಾ.ಕೆ.ಮಾಲತಿ,ಡಾ.ಟಿ.ಕೆ.ರವಿ,ರೂಪ,ಮೀನಾ,ಬಿ.ಎಸ್ ನಾಗರಾಜ,ರವೀಂದ್ರಕುಮಾರ್, ಸುಭಾಶ್ ಮತ್ತು ಸಿಬ್ಬಂದಿ ವರ್ಗ ರಮ್ಯ ಅವರಿಗೆ ಅಭಿನಂದನೆ ಸಲ್ಲಿಸಿ, ಅವರ ಮುಂದಿನ ಸೇವಾ ಅವಧಿ ಯಶಸ್ವಿಯಾಗಲಿ ಎಂದು ಹಾರೈಸಿದರು.
