ಬೈಕ್ ಗೆ ಬಸ್ ಡಿಕ್ಕಿ:ಮೂವರು ಯುವಕರ ದು*ರ್ಮರಣ

Spread the love

ಹಾಸನ: ಜಿಲ್ಲೆಯ ಹೊಳೆನರಸೀಪುರ ‌ಸಮೀಪ ಕೆ ಎಸ್ ಆರ್ ಟಿ ಸಿ ಬಸ್ ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಯುವಕರು ಮೃತಪಟ್ಟ ಘಟನೆ ಶನಿವಾರ ರಾತ್ರಿ ನಡೆದಿದೆ.

ಹೊಳೆನರಸಿಪುರ ತಾಲೂಕಿನ ಯಡೆಗೌಡನ ಹಳ್ಳಿ ಬಳಿ ಶನಿವಾರ ತಡರಾತ್ರಿ ಈ ಘಟನೆ ನಡೆದಿದೆ.

ಹೊಳೆನರಸೀಪುರ ಪಟ್ಟಣದ ಹೇಮಾವತಿ ಬಡಾವಣೆಯ ತರುಣ್ (19), ರೇವಂತ್ (26) ಹಾಗೂ ಗಾಂಧಿನಗರ ಬಡಾವಣೆಯ ಇರ್ಫಾನ್ (20) ಮೃತಪಟ್ಟ ಯುವಕರು.

ಇರ್ಫಾನ್ ಸ್ಥಳದಲ್ಲಿ ಮೃತಪಟ್ಟರೆ ಉಳಿದಿಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮರಣ ಹೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಾಸನದಿಂದ ಮೈಸೂರು ಕಡೆಗೆ ಹೊರಟಿದ್ದ ಕೆ ಎಸ್ ಆರ್ ಟಿ ಸಿ ಬಸ್ ಮತ್ತು ಮೈಸೂರು ಕಡೆಯಿಂದ ಬರುತ್ತಿದ್ದ ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿದೆ

ಈ ಸಂಬಂಧ ಹಳ್ಳಿ ಮೈಸೂರು ಪೊಲೀಸ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.