ಮೈಸೂರು: ಶ್ರೀ ಕೇತು ಗ್ರಸ್ತ ಚಂದ್ರಗ್ರಹಣ
ಮೋಕ್ಷ ಬಳಿಕ ಮೈಸೂರಿನ ಇರ್ವಿನ್ ರಸ್ತೆಯಲ್ಲಿರುವ ಈ ಪಂಚಮುಖಿ ಆಂಜನೇಯ ಸ್ವಾಮಿ ದೇವಸ್ಥಾನವನ್ನು ಶುದ್ಧೀಕರಿಸಲಾಯಿತು.
ಬುಧವಾರ ಲೋಕ ಕಲ್ಯಾಣಕ್ಕಾಗಿ ಸಾಮೂಹಿಕವಾಗಿ ಗ್ರಹಣ ಶಾಂತಿ ಹೋಮ ಹಾಗೂ ವಿಶೇಷ ಪೂಜೆಯನ್ನು ದೇವಸ್ಥಾನದ ಪ್ರಧಾನ ಅರ್ಚಕರಾದ ವಿದ್ವಾನ್ ಕೃಷ್ಣಮೂರ್ತಿ ಅವರ ನೇತೃತ್ವದಲ್ಲಿ ನೆರವೇರಿಸಲಾಯಿತು.
ಭಕ್ತರು ಶ್ರದ್ಧಾ ಭಕ್ತಿಯಿಂದ ಪೂಜೆಯಲ್ಲಿ ಪಾಲ್ಗೊಂಡು ಮಹಾಮಂಗಳಾರತಿ, ತೀರ್ಥ ಪ್ರಸಾದ ಸ್ವೀಕರಿಸಿದರು.
