ಮೈಸೂರು: ಸ್ಥಳೀಯ ಪ್ರವಾಸಿಗರು ಹಾಗೂ ವಿದೇಶಿ ಪ್ರವಾಸಿಗರು ಹೋಂಸ್ಟೇ,ರೆಸಾರ್ಟ್ ಹಾಗೂ ಲಾಡ್ಜ್ ಗಳಿಗೆ ಭೇಟಿ ನೀಡಿದಾಗ ಅವರ ರಕ್ಷಣೆಗೆ ಎಲ್ಲಾ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕೆಂದು ಮೈಸೂರು ಜಿಲ್ಲಾ ಪೊಲೀಸ್ ಅಧೀಕ್ಷಕ ವಿಷ್ಣುವರ್ಧನ ಸೂಚಿಸಿದರು.
ಮೈಸೂರು ಜಿಲ್ಲಾ ಪೊಲೀಸ್ ಕಚೇರಿ ಸಭಾಂಗಣದಲ್ಲಿಂದು ಮೈಸೂರು ಜಿಲ್ಲಾ ವ್ಯಾಪ್ತಿಯಲ್ಲಿರುವ ಹೋಂಸ್ಟೇ, ರೆಸಾರ್ಟ್ ಹಾಗೂ ಲಾಡ್ಜ್ ಗಳ ಮಾಲೀಕರ ಸಭೆ ನಡೆಸಿದ ಅಧೀಕ್ಷಕರು, ಪ್ರವಾಸಿಗರು ಹಾಗೂ ವಿದೇಶಿ ಪ್ರವಾಸಿಗರು ಹೋಂಸ್ಟೇ. ರೆಸಾರ್ಟ್ ಹಾಗೂ ಲಾಡ್ಜ್ ಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರ ರಕ್ಷಣೆಯ ಕುರಿತು ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮ ಮತ್ತು ಪಾಲಿಸಬೇಕಾದ ನಿಯಮಗಳ ಬಗ್ಗೆ ತಿಳುವಳಿಕೆ ನೀಡಿದರು.

ಸಭೆಯಲ್ಲಿ ಅಪರ ಪೊಲೀಸ್ ಅಧೀಕ್ಷಕರಾದ ಮಲ್ಲಿಕ್.ಸಿ., ಎಲ್.ನಾಗೇಶ್ ಹಾಗೂ ಮೈಸೂರು ಜಿಲ್ಲಾ ಪೊಲೀಸ್ ಅಧಿಕಾರಿಗಳು ಪಾಲ್ಗೊಂಡಿದ್ದರು.