ಯಳಂದೂರು: ಯಳಂದೂರು ತಾಲೂಕಿನ ಹೊನ್ನೂರು ಗ್ರಾಮದಲ್ಲಿ ಆಷಾಡ ಮಂಗಳವಾರ ಮತ್ತು ಚಾಮುಂಡೇಶ್ವರಿ ಹುಟ್ಟುಹಬ್ಬದ ಹಿನ್ನ್ನೆಲೆಯಲ್ಲಿ ಶ್ರೀ ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ನೆರವೇರಿಸಲಾಯಿತು.
ಮುಂಜಾನೆ ದೇವಿಗೆ ವಿಶೇಷ ದ್ರವ್ಯ ಅಭಿಷೇಕ, ವಿವಿಧ ಹೂವುಗಳಿಂದ ಅಲಂಕಾರ ಮಾಡಲಾಗಿತ್ತು.
ಬಳಿಕ ದೇವಾಲಯದ ಪ್ರಧಾನ ಅರ್ಚಕರಾದ ಶಿವಕುಮಾರ್ ದೀಕ್ಷಿತ್, ಮಂಜುನಾಥ್ ವಿಶೇ ಷ ಪೂಜಾ ಕೈಕಂರ್ಯಗಳು ನೆರವೇರಸಿ ಬಳಿಕ ಮಹಾಮಂಗಳಾರತಿ ಮಾಡಿದರು.
ನಂತರ ದೇವಾಲಯಕ್ಕೆ ಆಗಮಿಸಿದ ಭಕ್ತರಿಗೆ ಪ್ರಸಾದ ವಿನಿಯೋಗ ಮಾಡಲಾಯಿತು.
ಈ ವೇಳೆ ಮಹಿಳೆಯರು ತಾಯಿ ಚಾಮುಂಡೇಶ್ವರಿಗೆ ನಿಂಬೆಹಣ್ಣಿನ ಆರತಿ ಬೆಳಗಿದರು.
ಆಷಾಡ ಮಂಗಳವಾರ ಮತ್ತು ತಾಯಿಯ ವರ್ಧಂತಿ ಅಂಗವಾಗಿ ದೇವಾಲಯದಲ್ಲಿ ಸಂಭ್ರಮ ಮನೆ ಮಾಡಿತ್ತು.
ಕ್ಷೇತ್ರದ ಶಾಸಕ ಎ ಆರ್. ಕೃಷ್ಣಮೂರ್ತಿ, ಜಿಲ್ಲಾ ಗ್ಯಾರಂಟಿ ಯೋಜನೆ ಜಿಲ್ಲಾ ಅಧ್ಯಕ್ಷ ಚಂದ್ರು ದೇವಾಲಯಕ್ಕೆ ಆಗಮಿಸಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ,ಪ್ರಸಾದ ಸ್ವೀಕರಿಸಿದರು.

ದೇವಾಲಯಕ್ಕೆ ನೂರಾರಯ ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆದು ಪ್ರಾರ್ಥನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಗ್ರಾಮದ ಮಹದೇವಸ್ವಾಮಿ ಗೌಡರು, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ನಿರಂಜನ್, ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷರು ಗಳಾದ, ಗುರುಪ್ರಸಾದ್ ಮಹಾದೇವಸ್ವಾಮಿ, ಸಿದ್ದಪ್ಪಸ್ವಾಮಿ, ಆರ್ ಪುಟ್ಟ ಬಸವಯ್ಯ, ಮುಖಂಡರಾದ ಬಿ ರೇವಣ್ಣ, ಹೆಚ್ ಸಿ ಸೋಮಣ್ಣ , ಗುರು ಮಲ್ಲೇಶ್, ಸಿದ್ದಶೆಟ್ಟಿ, ನಾಗರಾಜ್ ಶೆಟ್ಟಿ, ಸೇರಿದಂತೆ ಗ್ರಾಮದ ಎಲ್ಲಾ ವರ್ಗದ ಮುಖಂಡರು ಸಾರ್ವಜನಿಕರು ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
