ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 21ನೇ ಘಟ್ಟಿಕೋತ್ಸವ ಸಮಾರಂಭದಲ್ಲಿ ಗೌರವ ಡಾಕ್ಟರೇಟ್ ಪದವಿಗೆ ಭಾಜನರಾದ ಇಬ್ಬರು ಮಹನೀಯರಿಗೆ ವಿವಿಧ ಸಂಘಟನೆಗಳು ಅಭಿನಂದಿಸಿದವು.
ಮೈಸೂರಿನ ಯೋಗ ನರಸಿಂಹ ಸ್ವಾಮಿ ದೇವಸ್ಥಾನದ ಸಂಸ್ಥಾಪಕರಾದ ನಾಡೋಜ ಡಾ.ಭಾಷ್ಯಂ ಸ್ವಾಮೀಜಿ ಹಾಗೂ ವಾಣಿಜ್ಯ ಕೈಗಾರಿಕಾ ಸಂಸ್ಥೆಯ ಅಧ್ಯಕ್ಷರಾದ ಕೆ.ಬಿ ಲಿಂಗರಾಜು ಅವರನ್ನು ಕೆಎಂಪಿ ಕೆ ಚಾರಿಟೇಬಲ್ ಟ್ರಸ್ಟ್, ಕರ್ನಾಟಕ ಹಿತರಕ್ಷಣಾ ವೇದಿಕೆ,ಮಯೂರ ಕನ್ನಡ ಯುವಕರ ಬಳಗದ ವತಿಯಿಂದ ಅಭಿನಂದಿಸಲಾಯಿತು.
ಯೋಗ ನರಸಿಂಹ ಸ್ವಾಮಿ ದೇವಸ್ಥಾನದ ಶೇಷಾದ್ರಿ,ಕೆಪಿಸಿಸಿ ಸದಸ್ಯರಾದ ನಜರ್ಬಾದ್ ನಟರಾಜ್, ಕರ್ನಾಟಕ ಹಿತರಕ್ಷಣಾ ವೇದಿಕೆ ಅಧ್ಯಕ್ಷರಾದ ವಿನಯ್ ಕುಮಾರ್, ಮಯೂರ ಕನ್ನಡ ಯುವಕರ ಬಳಗದ ಅಧ್ಯಕ್ಷರಾದ ಜಿ ರಾಘವೇಂದ್ರ, ಮುಖಂಡರಾದ ಬೆಟ್ಟೇಗೌಡ ಕೆಎಂಪಿಕೆ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್, ನಿರೂಪಕ ಅಜಯ್ ಶಾಸ್ತ್ರಿ, ಅಮಿತ್ ಅವರುಗಳು ಅಭಿನಂದಿಸಿ ಶುಭ ಕೋರಿದರು.
