ಬೆಂಗಳೂರು: ಭಾರತೀಯ ಸಿನಿಮಾ ರಂಗದ ಅತ್ಯುನ್ನತ ಗೌರವವಾದ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತರಾದ ನಟ ಅನಂತನಾಗ್ ಅವರನ್ನು ಬಿಜೆಪಿ ಸೇವಾ ಸಂಕಲ್ಪ ಅಭಿಯಾನದ ಪ್ರಯುಕ್ತ ಗೌರವಿಸಿ ಅಭಿನಂದಿಸಲಾಯಿತು.
ಬಿಜೆಪಿ ಪ್ರಕೋಷ್ಠಗಳ ರಾಜ್ಯ ಸಂಯೋಜಕ ಎಸ್.ದತ್ತಾತ್ರಿ, ಕಲಾ ಮತ್ತು ಸಂಸ್ಕಂತಿ ಪ್ರಕೋಷ್ಠದ ಸಂಚಾಲಕರಾದ ರೂಪಾ ಅಯ್ಯರ್, ಸಹ ಸಂಚಾಲಕ ಆತ್ಮಾನಂದ್, ಬಿಜೆಪಿ ರಾಜ್ಯ ಕಾರ್ಯಾಲಯ ಸಹ ಕಾರ್ಯದರ್ಶಿ ವಿಶ್ವನಾಥ ಅಣಜಿ, ಎಸ್ಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರಶಾಂತ್, ಅಸಂಘಟಿತ ಕಾರ್ಮಿಕರ ಪ್ರಕೋಷ್ಠದ ರಾಜ್ಯ ಸಂಚಾಲಕ ರಾಜೇಶ್, ಮಾಧ್ಯಮ ಪ್ರಕೋಷ್ಠದ ರಾಜ್ಯ ಸಹ ಸಂಚಾಲಕ ಪ್ರಶಾಂತ್ ಕೆಡೆಂಜಿ, ಮಾಧ್ಯಮ
ಪ್ರಕೋಷ್ಠದ ರಾಜ್ಯ ಸಮಿತಿ ಸದಸ್ಯ ನಾಗೇಶ್ ಮತ್ತಿತರರು ಇಂದು ಅನಂತನಾಗ್ ಅವರನ್ನು ಭೇಟಿ ಮಾಡಿ ಅಭಿನಂದಿಸಿದರು.
ಈ ವೇಳೆ ರೂಪಾ ಅಯ್ಯರ್ ಮತ್ತಿತರರು ಅನಂತನಾಗ್ ಅವರೊಂದಿಗೆ ಸಿನೆಮಾ ಮತ್ತಿತರ ವಿಷಯಗಳ ಕುರಿತು ಮಾತುಕತೆ ನಡೆಸಿದರು.
