ಮೈಸೂರು: ಹಾವುಗಳ ಬಗ್ಗೆ ಭಯ ಪಡಬಾರದು, ಅನಗತ್ಯ ಭಯದಿಂದ ಅವುಗಳನ್ನು ಸಾಯಿಸಲಾಗುತ್ತಿದೆ ಎಲ್ಲಾ ಹಾವುಗಳು ವಿಷಕಾರಿಯಲ್ಲ ಎಂದು ಉರಗ ರಕ್ಷಕ ಸ್ನೇಕ್ ಶ್ಯಾಮ್ ಹೇಳಿದರು.
ನಗರದ ಆರ್ ಟಿ ಒ ವೃತ್ತದ ಬಳಿ
ಕೆಎಂಪಿ ಕೆ ಚಾರಿಟೇಬಲ್ ಟ್ರಸ್ಟ್ ಹಾಗೂ ಪರಿಸರ ಸ್ನೇಹಿ ತಂಡದ ಆಶ್ರಯದಲ್ಲಿ ವಿಶ್ವ ಹಾವುಗಳ ದಿನಾಚರಣೆ ಅಂಗವಾಗಿ 98 ಸಾವಿರಕ್ಕೂ ಹೆಚ್ಚು ಹಾವುಗಳನ್ನು
ಸಂರಕ್ಷಿಸಿದ ಉರಗ ರಕ್ಷಕ ಸ್ನೇಕ್ ಶ್ಯಾಮ್ ಅವರಿಗೆ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.
ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು.
ಅರಣ್ಯ ಇಲಾಖೆ ಪರಿಸರ ಹಾಗೂ ವನ್ಯಜೀವಿಗಳ ಸಂರಕ್ಷಣೆಗೆ ಮುಂದಾಗಿರುವುದಕ್ಕೆ ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದರು.
ನಾಗರಹಾವು, ಕಾಳಿಂಗ ಸರ್ಪ ವಿಷಕಾರಿಯಾಗಿದ್ದು, ಹಪ್ಪಟೆ, ಕೇರೆ ಹಾವು, ಹಸಿರು ಹಾವು ಮುಂತಾದವು ವಿಷಕಾರಿಯಲ್ಲ. ಕೆಲವು ಹಾವುಗಳು ಹೆಚ್ಚು ವಿಷಕಾರಿಯಲ್ಲದಿದ್ದರೂ, ಹಪ್ಪಟೆ ಹಾವು ಕಚ್ಚಿದರೆ ವೈದ್ಯರ ಬಳಿ ತೆರಳಿ ಚಿಕಿತ್ಸೆ ಪಡೆಯಬೇಕು ಎಂದು ಸ್ನೇಕ್ ಶ್ಯಾಮ್ ಸಲಹೆ ನೀಡಿದರು.
ಹಾವು ಕಚ್ಚಿದಾಗ ಬಹುತೇಕ ಜನರು ಭಯದಿಂದ ಹೃದಯಾಘಾತವಾಗಿ ಸಾವನ್ನಪ್ಪುತ್ತಾರೆ. ಹಾವು ಕಚ್ಚಿದಾಗ ವ್ಯಕ್ತಿಗೆ ಧೈರ್ಯ ತುಂಬಬೇಕು ಮತ್ತು ಸಾಧ್ಯವಾದಷ್ಟು ಬೇಗ ಸಮೀಪದ ಆಸ್ಪತ್ರೆಗೆ ಕರೆದೊಯ್ಯಬೇಕು ಎಂದು ತಿಳಿಸಿದರು.
ಆಸ್ಪತ್ರೆಗಳಲ್ಲಿ ಹಾವು ಕಡಿತಕ್ಕೆ
ಚಿಕಿತ್ಸೆಗಾಗಿ ಪ್ರತ್ಯೇಕ ಕೊಠಡಿಗಳನ್ನು ಮೀಸಲಿಡಬೇಕು ಎಂದು ಈಗಾಗಲೇ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರಿಗೆ ಮನವಿ ಸಲ್ಲಿಸಿದ್ದೇವೆ ಅದು ಈ ಕೂಡಲೇ ಜಾರಿಗೆ ಬರಲಿ ಎಂದು ಶ್ಯಾಮ್ ಹೇಳಿದರು.
ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಅಧ್ಯಕ್ಷರಾದ ಲಿಂಗರಾಜು ಅವರು ಮಾತನಾಡಿ,ಕೋವಿಡ್ ನಂತಹ ಕಷ್ಟ ಕಾಲದಲ್ಲೂ ಮನೆಗಳಿಗೆ ಹಾವು ಬಂದಾಗ ಸ್ನೇಕ್ ಶ್ಯಾಮ್ ಅವರು ಧಾವಿಸಿ ಹಾವನ್ನ ಸಂರಕ್ಷಿಸಿದ್ದಾರೆ, ಅಂತರಾಷ್ಟ್ರೀಯ ಉರಗತಜ್ಞ ಸ್ನೇಕ್ ಶ್ಯಾಮ್ ರವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಬಂದಿದೆ, ಅಷ್ಟೇ ಅಲ್ಲದೇ 98 ಸಾವಿರಕ್ಕೂ ಹೆಚ್ಚು ಹಾವನ್ನ ಸಂರಕ್ಷಿಸಿದ್ದಾರೆ, ಪರಿಸರ ಸಂರಕ್ಷಣೆ ಜೊತೆಯಲ್ಲೆ ಧಾರ್ಮಿಕ ಕೇಂದ್ರವನ್ನ ಸ್ಥಾಪಿಸಿರುವುದು ಶ್ಲಾಘನೀಯ ಎಂದು ಹೇಳಿದರು.
ಪಠ್ಯಪುಸ್ತಕಗಳಲ್ಲಿ ಸ್ನೇಕ್ ಶ್ಯಾಮ್ ಅವರ ಸೇವೆ ಮತ್ತು ಪರಿಸರ ಕಾಳಜಿಯ ವಿಷಯದ ಬಗ್ಗೆ ಅಳವಡಿಸಿ ಸಣ್ಣ ಮಕ್ಕಳಲ್ಲಿ ಉರಗ ಮತ್ತು ಪರಿಸರ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸಲು ಸರ್ಕಾರ ಮುಂದಾಗಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷರಾದ ಲಿಂಗರಾಜು, ಮೃಗಾಲಯ ಪ್ರಾಧಿಕಾರ ಮಾಜಿ ಅಧ್ಯಕ್ಷರಾದ ಶಿವಕುಮಾರ್, ಕೆ ಆರ್ ಬ್ಯಾಂಕ್ ಅಧ್ಯಕ್ಷರಾದ ಬಸವರಾಜ್ ಬಸಪ್ಪ, ಜಿ ರಾಘವೇಂದ್ರ, ಕೆಎಂಪಿಕೆ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್, ಎಸ್ ಎನ್ ರಾಜೇಶ್, ಸಂದೇಶ್ ,ಪ್ರಮೋದ್ ಗೌಡ,ವಾಣಿಶ್,
ಎಚ್ ಪಿ ಚೇತನ್, ನಂದಕುಮಾರ್, ಸಂದೇಶ್, ಸುಪ್ರೀತ್, ಮಹಾನ್ ಶ್ರೇಯಸ್, ಮತ್ತಿತರರು ಹಾಜರಿದ್ದರು.
