ಬೆಂಗಳೂರು: ಪ್ರಮುಖ ರಾಜ್ಯರಾಜಕೀಯ ಬೆಳವಣಿಗೆಯೊಂದರಲ್ಲಿ, ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ಅವರು ರಾಜೀನಾಮೆ ಸಲ್ಲಿಸಿದ್ದಾರೆ.
ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರ ಸುದೀರ್ಘ ಮನವೊಲಿಕೆಯ ಬಳಿಕ ಅವರು ಈ ನಿರ್ಧಾರ ಕೈಗೊಂಡಿದ್ದಾರೆ.
ಮುಂಗಾರು ಅಧಿವೇಶನ ಆರಂಭವಾದ ಬಳಿಕ ಅಂದರೆ ಆಗಸ್ಟ್ 14 ರಂದು ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಲು ಬಸವರಾಜ ಹೊರಟ್ಟಿ ಅವರಹ ತೀರ್ಮಾನಿಸಿದ್ದರು.
ಅದರೆ ಅವರು ಈಗಲೇ ರಾಜೀನಾಮೆ ಸಲ್ಲಿಸಿದರು ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸ ಒದಗಿಸಿದೆ.
ಯಾವುದೇ ಒತ್ತಡವಿಲ್ಲದೆ, ಸಂಪೂರ್ಣ ಸ್ವ ಇಚ್ಛೆಯಿಂದಲೇ ತಾವು ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಹೊರಟ್ಟಿ, ಉಪ ಸಭಾಪತಿ ಅವರಿಗೆ ಸಲ್ಲಿಸಿರುವ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.
ನೂತನ ಸಭಾಪತಿ ಆಯ್ಕೆಯಾಗುವವರೆಗೆ ಬಸವರಾಜ ಹೊರಟ್ಟಿ ಅವರೇ ಹಂಗಾಮಿ ಸಭಾಪತಿಯಾಗಿ ಕಾರ್ಯನಿರ್ವಹಿಸಲಿದ್ದಾರೆ.
