ಮೈಸೂರು: ಅಕ್ರಮ ಸಂಬಂಧದ ವಿಚಾರದಲ್ಲಿ ಬ್ಲ್ಯಾಕ್ ಮೇಲ್ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಲಕ್ಕನಕೊಪ್ಪಲು ಗ್ರಾಮದಲ್ಲಿ ನಡೆದಿದೆ.
ಲಕ್ಕನಕೊಪ್ಪಲು ಗ್ರಾಮದ ಕಾಂತಾ ಅವರ ಪತ್ನಿ ಎಂ.ಆರ್. ಸಂಧ್ಯಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇದೇ ಗ್ರಾಮದ ವಿಕಾಸ್ ಎಂಬಾತನೊಂದಿಗೆ ಸಂಧ್ಯಾ ಅವರಿಗೆ ಪರಿಚಯವಿತ್ತು ಎನ್ನಲಾಗಿದ್ದು, ಮೊಬೈಲ್ ನಲ್ಲಿದ್ದ ಸಂದೇಶ ಮತ್ತು ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡಲಾಗುತ್ತಿತ್ತು ಎಂದು ಕುಟುಂಬದವರು ಆರೋಪಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಸಂಧ್ಯಾ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಕಾಸ್, ಕುಮಾರ್ ಮತ್ತು ವಸಂತ ಎಂಬ ಮೂವರ ವಿರುದ್ಧ ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆ ಬಳಿಕ ಪ್ರಮುಖ ಆರೋಪಿ ವಿಕಾಸ್ ಪರಾರಿಯಾಗಿದ್ದು, ಪೊಲೀಸರು ಬಲೆ ಬೀಸಿ ದ್ದಾರೆ.
