ಮೈಸೂರು: ಹುಬ್ಬಳ್ಳಿಯಲ್ಲಿ ಚಿಕ್ಕ ಮಗುವನ್ನು ಅಪಹರಿಸಿ, ಕೊಲೆ ಮಾಡಿದ ಆರೋಪಿಯನ್ನು ಕಾನೂನಿನ ಚೌಕಟ್ಟಿನಲ್ಲಿ ಗುಂಡಿಟ್ಟು ಕೊಲ್ಲಲಾಗಿದ್ದು, ತಕ್ಕ ಶಾಸ್ತಿ ಮಾಡಲಾಗಿದೆ ಎಂದು ಶ್ರೀ ದುರ್ಗಾಪೌಂಡೇಶನ್ ಅಧ್ಯಕ್ಷರಾದ ರೇಖಾ ಶ್ರೀನಿವಾಸ್ ಹೇಳಿದ್ದಾರೆ.
ಈ ಕುರಿತು ಮಾಧ್ಯಮ ಹೇಳಿಕೆ ನೀಡಿರುವ ಅವರು, ಇಂತಹ ಕ್ರಮ ಕೈಗೊಂಡಿದ್ದಕ್ಕೆ ಸರಕಾರ ಹಾಗೂ ಪೊಲೀಸ್ ಇಲಾಖೆಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ನಡೆದ ಘಟನೆ ಇಡೀ ಸಮಾಜ ತಲೆ ತಗ್ಗಿಸುವಂತಹದು, ಇಂತಹ ಘಟನೆಗಳು ಕೊನೆಯಾಗಬೇಕು. ಈ ರಾಕ್ಷಸಿ ಕೃತ್ಯವನ್ನು ಎಲ್ಲರೂ ಖಂಡಿಸಬೇಕು ಎಂದು ಕರೆ ನೀಡಿದ್ದಾರೆ.
ಹುಬ್ಬಳ್ಳಿ ಪೊಲೀಸರ ಈ ದಿಟ್ಟ ಕ್ರಮಕ್ಕೆ ಎಲ್ಲೆಡೆಯಿಂದ ಶ್ಲಾಘನೆ ಕೇಳಿ ಬರುತ್ತಿವೆ, ಇದು ಅತ್ಯಾಚಾರಿಗಳಿಗೆ ಒಂದು ಎಚ್ಚರಿಕೆಯ ಗಂಟೆಯಾಗಿದೆ, ಅತ್ಯಾಚಾರಿಗಳಿಗೆ ಇಂತಹ ಶಿಕ್ಷೆ ನೀಡಿದರೆ ಅವರಲ್ಲಿ ಭಯ ಬರುವುದು,
ತ್ವರಿತವಾಗಿ ವಿಧಿಸಿದ ಈ ಶಿಕ್ಷೆಯ ಭಯದಿಂದಾದರೂ ಇಂಥಾ ದುರುಳರ ಸಂಖ್ಯೆ ಕಡಿಮೆಯಾಗಲಿ ಎಂದು ರೇಖಾ ಶ್ರೀನಿವಾಸ್ ಹೇಳಿದ್ದಾರೆ.