ಮೈಸೂರು: ಹುಬ್ಬಳ್ಳಿಯ ಬಿಜೆಪಿ ಕಾರ್ಯಕರ್ತೆ ಸುಜಾತ ಜೊತೆ ಪೊಲೀಸರು ನಡೆದುಕೊಂಡ ರೀತಿ, ಇಡೀ ನಾಗರಿಕ ಸಮಾಜ ತಲೆ ತಗ್ಗಿಸುವಂತೆ ಮಾಡಿದೆ ಎಂದು
ಬಿಜೆಪಿ ನಾಯಕಿ ಡಾ.ಹೇಮಾ ನಂದೀಶ್ ಹೇಳಿದ್ದಾರೆ.
ಮತದಾರರ ಪಟ್ಟಿ ಪರಿಷ್ಠರಣೆ ಸಂದರ್ಭದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದ ಕಾರಣವನ್ನೇ ಮುಂದಿಟ್ಟುಕೊಂಡು ಕಾಂಗ್ರೆಸ್ ನ ಮಾಜಿ ಕಾರ್ಪೊರೇಟರ್ ಸುನಂದ ಅವರ ದೂರಿನ ಮೇಲೆ ದಲಿತ ಮಹಿಳೆ ಸುಜಾತರನ್ನು ಬಂಧಿಸಿ ಠಾಣೆಗೆ ಕರೆತಂದು ವಿವಸ್ತ್ರಗೊಳಿಸಿ, ಅಮಾನವೀಯ ಕೃತ್ಯ ನಡೆಸಿರುವ ಪೊಲೀಸರ ದುರ್ವತ್ರನೆ ಖಂಡನೀಯ ಎಂದು ಹೇಮಾ ನಂದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪೊಲೀಸರ ತಾಲಿಬಾನೀ ಸಂಸ್ಕೃತಿ ಸಮಾಜಕ್ಕೆ ಕಳಂಕವಾಗಿದೆ. ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳ ಮೇಲೆ ಕೇಸು ದಾಖಲಿಸಿ ಕ್ರಮ ಕೈಗೊಳ್ಳಬೇಕೆಂದು ಅವರು ಆಗ್ರಹಿಸಿದ್ದಾರೆ.
ರಾಜ್ಯದ ಕಾಂಗ್ರೆಸ್ ಸರ್ಕಾರದ
ದಬ್ಬಾಳಿಕೆಯಿಂದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ, ಇದು ಹೀಗೆಯೇ ಮುಂದುವರೆದರೆ ನಾಡಿನ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಮಾ ಅವರು ಎಚ್ಚರಿಸಿದ್ದಾರೆ.
ಅನ್ಯಾಯಕ್ಕೆ ಒಳಗಾದ ಮಹಿಳೆಗೆ ನ್ಯಾಯ ಒದಗಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.
