ಹುಣಸೂರು: ಸಚಿವ ಸಂಪುಟದಿಂದ ಸಹಕಾರ ಸಚಿವ ರಾಜಣ್ಣ ಅವರನ್ನು ವಜಾ ಮಾಡಿದ್ದನ್ನು ಖಂಡಿಸಿ ಇಂದು ಹುಣಸೂರಿನಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದವು.
ಹುಣಸೂರಿನ ಸಂವಿಧಾನ ವೃತ್ತದಲ್ಲಿ ಹುಣಸೂರು ತಾಲೂಕು ನಾಯಕ ಸಮಾಜದ ನೇತೃತ್ವದಲ್ಲಿ ದಲಿತ ಸಂಘಟನೆ ಗಳು, ಕರ್ನಾಟಕ ಪ್ರಜಾ ಪಾರ್ಟಿ ರೈತ ಪರ್ವ ಸೇರಿದಂತೆ ಹಲವು ಸಂಘಟನೆಗಳವರು ಪ್ರತಿಭಟನೆ ನಡೆಸಿದರು.
ನಾಯಕ ಸಮಾಜದ ಹಿರಿಯ ಮುಖಂಡರು ಹಾಗೂ ನೇರ ನುಡಿಯ ರಾಜಕಾರಣಿ ಕೆ ಎನ್ ರಾಜಣ್ಣ ಅವರನ್ನು ಉಚ್ಚಾಟನೆ ಮಾಡಿರುವುದು ಸರಿಯಲ್ಲ ಕೂಡಲೇ ವಾಪಸು ಪಡೆಯಬೇಕು ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆ ನಂತರ ತಾಲೂಕು ಕಚೇರಿಗೆ ತೆರಳಿ ಎಸಿ ಅವರಿಗೆ ಮನವಿ ಸಲ್ಲಿಸಿ ಸರ್ಕಾರಕ್ಕೆ ರವಾನಿಸುವಂತೆ ಕೋರಲಾಯಿತು.
ಪ್ರತಿಭಟನೆಯಲ್ಲಿ ಅಣ್ಣಯ್ಯ ನಾಯಕ್, ಸೋಮಶೇಖರ್, ಕರ್ನಾಟಕ ಪ್ರಜಾ ಪಾರ್ಟಿ ರೈತ ಪರ್ವ ಹುಣಸೂರು ತಾ.ಅಧ್ಯಕ್ಷ ಚೆಲುವರಾಜು ಸೇರಿದಂತೆ ನಾಯಕ ಸಮಾಜದ ಮುಖಂಡರು, ದಲಿತ ಸಂಘಟನೆಗಳ ಮುಖಂಡರು ಮತ್ತು ಇತರ ಸಂಘಟನೆಗಳವರು ಪಾಲ್ಗೊಂಡಿದ್ದರು.
