ಹುಣಸೂರು: ಹುಣಸೂರಿನ ಮುನೇಶ್ವರ ಕಾವಲ್ ನಲ್ಲಿರುವ ಪುರಭವನದಲ್ಲಿ ಬುಧವಾರ ಜೆಡಿಎಸ್ ತಾಲೂಕು ಕಾರ್ಯಕರ್ತರ ಬೃಹತ್ ಸಮಾವೇಶವನ್ನು ಹಮ್ಮಿಕೊಳ್ಳಲಾಯಿತು.
ಜನರೊಂದಿಗೆ ಜನತಾದಳ ಹೆಸರಿನ ಈ ಸಮಾವೇಶದಲ್ಲಿ ಯುವ ಜೆಡಿಎಸ್ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಪಾಲ್ಗೊಂಡು ತಳಮಟ್ಟದಿಂದ ಪಕ್ಷವನ್ನು ಸದೃಢಗೊಳಿಸುವಂತೆ ಕರೆ ಕಾರ್ಯಕರ್ತರಿಗೆ ಕರೆ ನೀಡಿದರು.
ತಾಲೂಕಿನಾದ್ಯಂತ ಸಾವಿರಾರು ಕಾರ್ಯಕರ್ತರು, ಸದಸ್ಯರು ಪಾಲ್ಗೊಂಡಿದ್ದರು.ಎಲ್ಲರಿಗೂ ಊಟದ ವ್ಯವಸ್ಥೆ ಮಾಡಲಾಗಿತ್ತು.
ಹುಣಸೂರು ಶಾಸಕ ಜಿ.ಡಿ ಹರೀಶ್ ಗೌಡ ಅವರ ನೇತೃತ್ವದಲ್ಲಿ ನಡೆದ ಈ ಸಮಾವೇಶದಲ್ಲಿ ತಾಲೂಕು ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಈ ಬಾರಿಯ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ನಮ್ಮ ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಗೆದ್ದು ಬರಬೇಕಿದೆ.ಈ ನಿಟ್ಟಿನಲ್ಲಿ ಈಗಿನಿಂದಲೇ ಸದಸ್ಯರು, ಕಾರ್ಯಕರ್ತರು ಶ್ರಮಿಸಬೇಕು ಎಂದು ಜಿ.ಡಿ.ಹರೀಶ್ ಗೌಡ ತಿಳಿಸಿದರು.
ಜೆಡಿಎಸ್ ಮುಖಂಡ ಹಾಗೂ ಮಾಜಿ ಶಾಸಕ ಸಾ ರಾ ಮಹೇಶ್, ಸ್ಥಳೀಯ ಮುಖಂಡರು ಸೇರಿದಂತೆ ಹಲವಾರು ಜೆಡಿಎಸ್ ಪಕ್ಷದ ವಿವಿಧ ಗ್ರಾಮಗಳ ಮುಖಂಡರು ಸಮಾವೇಶದಲ್ಲಿ ಪಾಲ್ಗೊಂಡಿದ್ದರು.
