ಹುಣಸೂರು: ಸಂವಿಧಾನ ಶಿಲ್ಪಿ ಧೀಮಂತ ನಾಯಕ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರ 135ನೇ ಜಯಂತಿ ಪ್ರಯುಕ್ತ ಹುಣಸೂರಿನಲ್ಲಿ ಇದೇ ಪ್ರಥಮ ಬಾರಿಗೆ ಕುಸ್ತಿ ಉತ್ಸವ ಹಮ್ಮಿಕೊಳ್ಳಲಾಗಿದೆ.
ಇಡೀ ಹುಣಸೂರು ತಾಲೂಕಿನ ಜನತೆ, ಎಲ್ಲಾ ಗ್ರಾಮಗಳ ಯಜಮಾನರು, ಮುಖಂಡರು, ಸಂಘ ಸಂಸ್ಥೆಗಳು, ಸರ್ಕಾರಿ ನೌಕರರು, ಜನಪ್ರತಿನಿಧಿಗಳು, ವಿವಿಧ ಪಕ್ಷಗಳ ಮುಖಂಡರು ಸೇರಿ ಅಂಬೇಡ್ಕರ್ ಜಯಂತಿ ಪ್ರಯುಕ್ತ ಈ ಕುಸ್ತಿ ಉತ್ಸವವನ್ನು ಹಮ್ಮಿಕೊಂಡಿದ್ದಾರೆ.
ಏಪ್ರಿಲ್ 26 ರಂದು ಮಧ್ಯಾಹ್ನ 12 ಗಂಟೆಗೆ ಕುಸ್ತಿ ಪಂದ್ಯಾವಳಿ ಹುಣಸೂರು ಪಟ್ಟಣದ ಮುನೇಶ್ವರ ಕಾವಲ್ ಮೈದಾನದಲ್ಲಿ ನಡೆಯಲಿದೆ.
ಕುಸ್ತಿ ಪಂದ್ಯಾವಳಿಗೆ ಆಗಮಿಸುವವರಿಗೆ,ಅಭಿಮಾನಿಗಳಿಗೆ ಸಾರ್ವಜನಿಕರಿಗೆ ಯಾರಿಗೂ ತೊಂದರೆ ಆಗಬಾರದು ಎಂಬ ಉದ್ದೇಶದಿಂದ ಕರ್ನಾಟಕ ಪ್ರಜಾ ಪಾರ್ಟಿ ರೈತ ಪರ್ವ ವತಿಯಿಂದ ಅನ್ನದಾನವನ್ನು ಹಮ್ಮಿಕೊಂಡಿದ್ದೇವೆ ಎಲ್ಲರೂ ಸಹಕರಿಸಬೇಕು ಎಂದು ಹುಣಸೂರು ತಾಲೂಕು ಅಧ್ಯಕ್ಷ ಚೆಲುವರಾಜು ವರ್ಷಿಣಿ ನ್ಯೂಸ್ ವೆಬ್ ಪೋರ್ಟಲ್ ಗೆ ಮಾಹಿತಿ ನೀಡಿದ್ದಾರೆ.
ಮುಖ್ಯ ಅತಿಥಿಗಳಾಗಿ ಹುಣಸೂರು ಶಾಸಕ ಜಿ.ಡಿ ಹರೀಶ್ ಗೌಡ, ಮಾಜಿ ಶಾಸಕ ಮಂಜುನಾಥ್,ಅಧಿಕಾರಿಗಳು ಸೇರಿದಂತೆ ಅನೇಕ ಗಣ್ಯರು ಆಗಮಿಸಲಿದ್ದಾರೆ.
