ಹುಣಸೂರು: ಹುಣಸೂರಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಮಾಡಲಾಯಿತು.
ಆಸ್ಪತ್ರೆಯ ಆಡಳಿತಾಧಿಕಾರಿಗಳು, ವೈದ್ಯಾಧಿಕಾರಿಗಳು, ವೈದ್ಯರು ನರ್ಸ್ಗಳು ಹಾಗೂ ಎಲ್ಲಾ ಸಿಬ್ಬಂದಿ ಹಾಜರಿದ್ದರು.
ಮಹರ್ಶಿ ವಾಲ್ಮೀಕಿ ಅವರ ಭಾವಚಿತ್ರ ಇಟ್ಟು ಪುಷ್ಪ ನಮನ ಸಲ್ಲಿಸಿ ಪೂಜಿಸಲಾಯಿತು.ಸಾಮಾನ್ಯವಾಗಿ ಆಸ್ಪತ್ರೆಗಳಲ್ಲಿ ಇಂತಹ ಜಯಂತಿ ಆಚರಣೆ ವಿರಳ.ಆದರೆ ಹುಣಸೂರು ಆಸ್ಪತ್ರೆಯಲ್ಲಿ ವಾಲ್ಮೀಕಿ ಜಯಂತಿ ಆಚರಿಸಿ ಮಾದರಿಯಾಗಿದ್ದಾರೆ.
