ಹುಣಸೂರು: ನಾಡು ಕಂಡ ಅಪ್ರತಿಮ ನಾಯಕ ರಾಜ ಋಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜನ್ಮದಿನವನ್ನು ಹುಣಸೂರು ತಾಲೂಕು ಕಚೇರಿಯಲ್ಲಿ ಹಮ್ಮಿಕೊಳ್ಳಲಾಯಿತು.

ಹುಣಸೂರು ತಹಸೀಲ್ದಾರ್ ಮಂಜುನಾಥ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೃಷ್ಣರಾಜ ಒಡೆಯರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅವರ ಸ್ಮರಣೆ ಮಾಡಲಾಯಿತು.

ಈ ವೇಳೆ ಮಾತಾಡಿದ ತಹಸಿಲ್ದಾರ್ ಮಂಜುನಾಥ್ ಅವರು ಇಡೀ ನಾಡಿನ ಅಭಿವೃದ್ಧಿಗೆ ಶ್ರಮಿಸಿದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕೊಡುಗೆಗಳನ್ನು ನಾವೆಲ್ಲರೂ ಸದಾ ಸ್ಮರಿಸಬೇಕು ಎಂದು ಕರೆ ನೀಡಿದರು.

ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ನೀರು, ಕೃಷಿ, ವಿದ್ಯುತ್, ಕಲೆ ಹಾಗೂ ಹೆಣ್ಣು ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚು ಒತ್ತು ನೀಡಿದ್ದರು ಅದಕ್ಕಾಗಿ ಬಹಳ ಶ್ರಮಿಸಿದವರು ಎಂದು ತಹಸೀಲ್ದಾರ್ ಬಣ್ಣಿಸಿದರು.
ಇಡೀ ನಾಡು ಕಂಡ ಅಪ್ರತಿಮ ಶೂರರು ಅದ್ಭುತ ಆಡಳಿತಗಾರರು ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಮಾದರಿಯನ್ನು ಎಲ್ಲರೂ ಅನುಸರಿಸಬೇಕಿದೆ ಎಂದು ಮಂಜುನಾಥ್ ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಗ್ರೇಡ್ 2 ತಹಸೀಲ್ದಾರ್ ನರಸಿಂಹಯ್ಯ,ಶಿರಸ್ತೆದಾರ್ ಶ್ರೀಪಾದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಮತ್ತು ರೈತ ಸಂಘದ ಜಿಲ್ಲಾಧ್ಯಕ್ಷ ಹೊಸೂರು ಕುಮಾರ್, ಕರ್ನಾಟಕ ಪ್ರಜಾ ಪಾರ್ಟಿ ರೈತ ಪರ್ವ ತಾಲೂಕು ಅಧ್ಯಕ್ಷ ಚೆಲುವರಾಜು, ದಲಿತ ಮುಖಂಡರಾದ ಬಸವಲಿಂಗಯ್ಯ, ಲಾಯರ್ ಪುಟ್ಟರಾಜು ಸೇರಿದಂತೆ ಅನೇಕ ಮುಖಂಡರು ಪಾಲ್ಗೊಂಡಿದ್ದರು.