ಶ್ರೀನಗರ: ಗಡಿ ನಿಯಂತ್ರಣ ರೇಖೆ ಬಳಿ ಉಗ್ರರು ಸ್ಪೋಟಿಸಿದ ಐಇಡಿ ಯಿಂದಾಗಿ,ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ.
ಅಖ್ನೂರ್ ಸೆಕ್ಟರ್‌ನ ಲಲೇಲಿ ಪ್ರದೇಶದಲ್ಲಿ ಸೇನಾ ಸಿಬ್ಬಂದಿ ಗಸ್ತು ತಿರುಗುತ್ತಿದ್ದಾಗ ಶಂಕಿತ ಐಇಡಿ ಸ್ಫೋಟ ಸಂಭವಿಸಿ ಸೇನಾ ಕ್ಯಾಪ್ಟನ್ ಸೇರಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಅಖ್ನೂರ್ ಸೆಕ್ಟರ್‌ನ ಗಡಿ ನಿಯಂತ್ರಣ ರೇಖೆ(ಎಲ್‌ಒಸಿ)ಯ ಉದ್ದಕ್ಕೂ ಉಗ್ರರು ಮಂಗಳವಾರ ಸುಧಾರಿತ ಸ್ಫೋಟಕ ಸಾಧನ(ಐಇಡಿ) ಸ್ಫೋಟಿಸಿದ್ದಾರೆ.
ಹೆಚ್ಚುವರಿ ಸೇನಾ ಸಿಬ್ಬಂದಿಯನ್ನು ಪ್ರದೇಶಕ್ಕೆ ರವಾನಿಸಲಾಗಿದ್ದು, ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ ಎಂದು ಸೇನೆ ತಿಳಿಸಿದೆ.