ಮೈಸೂರು: ಪ್ಯಾಸೆಂಜರ್ ಆಟೋದಲ್ಲಿ ಗಾಂಜಾ ಸೊಪ್ಪನ್ನು ಸಾಗಿಸುತ್ತಿದ್ದ ಆರೋಪಿಯನ್ನು ಇಲವಾಲ ಠಾಣೆ ಪೊಲೀಸರು ಬಂಧಿಸಿದ್ದಾರೆ
ಪ್ಯಾಸೆಂಜರ್ ಆಟೋದಲ್ಲಿ ಮೈಸೂರಿನಿಂದ ಪಿರಿಯಾಪಟ್ಟಣ ಕಡೆಗೆ ಅಕ್ರಮವಾಗಿ ಗಾಂಜಾ ಸೊಪ್ಪನ್ನು ಸಾಗಣೆ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಆಧರಿಸಿ ಇಲವಾಲ ಠಾಣೆ ಪೊಲೀಸರು ದಾಳಿ ಮಾಡಿ ಆರೋಪಿಯನ್ನು ಬಂಧಿಸಿದ್ದಾರೆ.
ಆರೋಪಿಯಿಂದ ಒಟ್ಟು 1 ಕೆಜಿ 585 ಗ್ರಾಂ ತೂಕದ ಗಾಂಜಾವನ್ನು ವಶಪಡಿಸಿಕೊಂಡು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
