ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ಅಣ್ಣ ಹತ್ಯೆ ಮಾಡಿರುವ ಘಟನೆಭಾಗಮಂಡಲ ಸಮೀಪದ ಕುಂದಚೇರಿ ಗ್ರಾಮದಲ್ಲಿ ನಡೆದಿದೆ.
ಕುಂಞರಾಮ(೫೫) ಹಾಗೂ ಯಶೋಧ(೪೫) ದುರ್ದೈವಿಗಳು.
ಯಶೋಧ ಅವರ ಸೋದರ ಚಂದು(೭೦) ತನ್ನ ಸಹೋದರಿ ಮತ್ತು ಆಕೆಯ ಸಂಗಾತಿಯನ್ನು ಕೊಲೆ ಮಾಡಿದ್ದಾನೆ.
ಕುಂಞರಾಮ ಮತ್ತು ಯಶೋಧ ಕಳೆದ ೨ ವರ್ಷಗಳಿಂದ ಅನೈತಿಕ ಸಂಬಂಧ ಹೊಂದಿದ್ದರಂತೆ, ಇದೇ ವಿಷಯಕ್ಕೆ ಆಗಾಗ ಅಣ್ಣ,ತಂಗಿ ನಡುವೆ ಗಲಾಟೆ ನಡೆಯುತ್ತಿತ್ತು.
ಅದೇ ರೀತಿ ಮೊನ್ನೆ ಕುಡಿದು ಮೂವರು ಗಲಾಟೆ ಮಾಡಿದ್ದಾರೆ. ಸ್ಥಳೀಯ ಕಾರ್ಯಕ್ರಮವೊಂದರಲ್ಲಿ ಕುಡಿದು ಬಂದು ಗಲಾಟೆ ಮಾಡಿದ ಚಂದು ಬಳಿಕ ಇಬ್ಬರನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿದ್ದಾನೆ.
ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್. ಬಿಂದುಮಣಿ, ಡಿವೈಎಸ್ಪಿ ಪಿ.ಎ. ಸೂರಜ್, ಸಿಪಿಐ ಅನೂಪ್ ಮಾದಪ್ಪ, ಪಿಎಸ್ಐ ರಾಘವೇಂದ್ರ ಮತ್ತು ಸಿಬ್ಬಂದಿ, ಅಪರಾಧ ಪತ್ತೆದಳದ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದರು.
ಭಾಗಮಂಡಲ ಪೊಲೀಸ್ ಠಾಣೆ ಪೊಲೀಸರು ಆರೋಪಿ ಚಂದುವನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
