ಢಾಕಾ: ಬಾಂಗ್ಲಾದೇಶದ ಸಾರ್ವತ್ರಿಕ ಚುನಾವಣೆ ಇರುವಾಲೇ ಮತ್ತೊಬ್ಬ ಹಿಂದೂ ವ್ಯಕ್ತಿಯನ್ನು ಹತ್ಯೆ ಮಾಡಿರುವ ಹೇಯ ಘಟನೆ ನಡೆದಿದೆ.
ಈ ಘಟನೆಯಿಂದ ಬಾಂಗ್ಲಾದೇಶದ ಮೌಲ್ವಿಬಜಾರ್ ಜಿಲ್ಲೆಯಲ್ಲಿ ಉದ್ವಿಗ್ನತೆ ಉಂಟಾಗಿದೆ.
28 ವರ್ಷದ ಹಿಂದೂ ವ್ಯಕ್ತಿಯ ಕೈಕಾಲುಗಳನ್ನು ಕಟ್ಟಿಹಾಕಿ ಕೊಲೆ ಮಾಡಲಾಗಿದೆ.ಇದರಿಂದಾಗಿ ಆತಂಕ ತೀವ್ರವಾಗಿದೆ.
ರತನ್ ಸಾಹುಕರ್ ಎಂಬವರನ್ನು ಹತ್ಯೆ ಮಾಡಲಾಗಿದೆ, ರತನ್ ಚಂಪಾ ಪ್ರದೇಶದ ಚಹಾ ತೋಟಗಳಲ್ಲಿ ಕೆಲಸ ಮಾಡುತ್ತಿದ್ದರು. ಬುಧವಾರ ಅವರ ಶವ ಪತ್ತೆಯಾಗಿದೆ.
ರತನ್ ಅವರ ಕೈ ಮತ್ತು ಕಾಲುಗಳನ್ನು ಕಟ್ಟಿಹಾಕಲಾಗಿತ್ತು ಮತ್ತು ಅವರ ದೇಹದಲ್ಲಿ ತೀವ್ರ ಗಾಯಗಳಾಗಿದ್ದವು ಎಂದು
ರತನ್ ಜೊತೆ ಕೆಲಸ ಮಾಡುತ್ತಿದ್ದ ಕಾರ್ಮಿಕರು ತಿಳಿಸಿದ್ದಾರೆ.
ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದು, ಕೊಲೆ ಚುನಾವಣೆಗೆ ಸಂಬಂಧಿಸಿದೆಯೇ ಅಥವಾ ಬೇರೆ ಯಾವುದಾದರೂ ಉದ್ದೇಶವಿದೆಯೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.
ಕೆಲವು ದಿನಗಳ ಹಿಂದೆ, ಮೈಮೆನ್ಸಿಂಗ್ ಜಿಲ್ಲೆಯಲ್ಲಿ ಮತ್ತೊಬ್ಬ ಹಿಂದೂ ಉದ್ಯಮಿ ಸುಶೇನ್ ಚಂದ್ರ ಸರ್ಕಾರ್ (62) ಅವರನ್ನು ಕ್ರೂರವಾಗಿ ಹತ್ಯೆ ಮಾಡಲಾಗಿತ್ತು.
ಬಾಂಗ್ಲಾದೇಶದಲ್ಲಿ ಹೀಗೆ ಪದೇ,ಪದೆ ಹಿಂದೂಗಳ ಹತ್ಯೆ ನಡೆಯುತ್ತಲೇ ಇದ್ದು,ಹೇಳುವವರು ಕೇಳುವವರು ಯಾರೂ ಇಲ್ಲದಂತಾಗಿದೆ.
