ಮೈಸೂರು: ಮೈಸೂರಿನಲ್ಲಿ 79 ಸ್ವಾತಂತ್ರೋತ್ಸವ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಣೆ ಮಾಡಲಾಯಿತು.
ನಗರದ ಪಂಜಿನ ಕವಾಯತು ಮೈದಾನದಲ್ಲಿ ಜಿಲ್ಲಾಡಳಿತ, ಮೈಸೂರು ಮಹಾನಗರ ಪಾಲಿಕೆಯ ವತಿಯಿಂದ 79 ಸ್ವಾತಂತ್ರೋತ್ಸವ ದಿನಾಚರಣೆಯನ್ನು ಏರ್ಪಡಿಸಲಾಗಿತ್ತು. ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ಧ್ವಜಾರೋಹಣ ನೆರವೇರಿಸಿ ದ್ವಜ ವಂದನೆ ಸ್ವೀಕರಿಸಿದರು.
ವಿವಿಧ 24 ತುಕಡಿಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು.ನಂತರ ಜಿಲ್ಲಾ ಉಸ್ತುವಾರಿ ಸಚಿವರು ಸ್ವಾತಂತ್ರೋತ್ಸವದ ಸಂದೇಶವನ್ನು ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನರಸಿಂಹ ರಾಜ ವಿಧಾನ ಸಭಾ ಕ್ಷೇತ್ರದ ಶಾಸಕರಾದ ತನ್ವೀರ್ ಸೇಠ್ ಅವರು ವಹಿಸಿದ್ದರು.
ಲಿಟ್ಲ್ ಜಮ್ಸ್ ಶಾಲೆಯ ಮಕ್ಕಳು ನಾವೆಲ್ಲರೂ ಒಂದೇ ಎಂಬ ಗೀತೆಗೆ ನೃತ್ಯ ಪ್ರದರ್ಶನ ನೀಡಿದರು. 12 ಸರ್ಕಾರಿ ಪ್ರೌಢ ಶಾಲಾ ಮಕ್ಕಳು ಏರೋ ಬ್ರಿಕ್ಸ್ ನೃತ್ಯ ಪ್ರದರ್ಶನ ನೀಡಿದರು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ಸಿ ಎನ್ ಮಂಜೇಗೌಡ, ಜಿಲ್ಲಾಧಿಕಾರಿ ಜಿ ಲಕ್ಷ್ಮೀಕಾಂತ ರೆಡ್ಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಣಾಧಿಕಾರಿ ಎಸ್ ಯುಕೇಶ್ ಕುಮಾರ್, ಮೈಸೂರು ಮಹಾನಗರ ಪಾಲಿಕೆಯ ಆಯುಕ್ತ ಶೇಕ್ ತನ್ವೀರ್ ಆಸಿಫ್, ಮೈಸೂರು ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಡಾ. ಪಿ ಶಿವರಾಜು ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿ ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.