ಭಾರತ, ಶ್ರೀಲಂಕಾ ನಡುವಿನ ರಕ್ಷಣಾ ಸಹಕಾರ ಒಪ್ಪಂದಕ್ಕೆ ಸಹಿ ಹಾಕಿದ ಮೋದಿ

ಕೊಲಂಬೊ,ಏ.5: ಎರಡು ದಿನಗಳ ಶ್ರೀಲಂಕಾ
ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಭಾರತ ಮತ್ತು ಶ್ರೀಲಂಕಾ ನಡುವಿನ ಮಹತ್ವದ ರಕ್ಷಣಾ ಸಹಕಾರ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ.

ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧವನ್ನು ಇನ್ನಷ್ಟು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಈ ಒಪ್ಪಂದಕ್ಕೆ ಸಹಿ ಹಾಕಲಾಗಿದೆ.

ಮತ್ತೊಂದೆಡೆ ದ್ವೀಪ ರಾಷ್ಟ್ರದಲ್ಲಿ ಚೀನಾ ಮಿಲಿಟರಿ ಪ್ರಭಾವ ಹೊಂದುವುದಕ್ಕೆ ತಿರುಗೇಟು ನೀಡುವ ಮುಖ್ಯ ಉದ್ದೇಶ ಹೊಂದಿರುವುದಾಗಿ ವರದಿ ತಿಳಿಸಿದೆ.

ಶುಕ್ರವಾರ ಶ್ರೀಲಂಕಾಕ್ಕೆ ಭೇಟಿ ನೀಡಿದ್ದ ಪ್ರಧಾನಿ ಮೋದಿ ಅವರು ಮಾತುಕತೆ ನಡೆಸಿದ್ದರು.

ಈ ಪ್ರವಾಸದಲ್ಲಿ ಭಾರತ ಮತ್ತು ಶ್ರೀಲಂಕಾ ನಡುವೆ ಆರೋಗ್ಯ, ಡಿಜಿಟಲೈಜೇಶನ್, ಇಂಧನ ಮತ್ತು ರಕ್ಷಣಾ ವ್ಯವಸ್ಥೆ ಸೇರಿದಂತೆ ಒಟ್ಟು ಎಂಟು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ ಎಂದು ವರದಿಯಾಗಿದೆ.

ಶ್ರೀಲಂಕಾ ಆರ್ಥಿಕ ಸಂಕಷ್ಟದ ಸವಾಲು ಎದುರಿಸುತ್ತಿರುವ ನಡುವೆ ರಿಯಾಯ್ತಿ ದರದಲ್ಲಿ ಇಂಧನ ಸರಬರಾಜು ಮಾಡುವ ಬಗ್ಗೆ ಒಪ್ಪಂದದಲ್ಲಿ ಹೆಚ್ಚು ಒತ್ತು ನೀಡಲಾಗಿದೆ ಎಂದು ಹೇಳಲಾಗುತ್ತಿದೆ.

ಪ್ರಧಾನಿ ಮೋದಿ ಅವರ ಭೇಟಿಯ ಸಂದರ್ಭದಲ್ಲಿ ಶ್ರೀಲಂಕಾದ ಬೃಹತ್ ಸಾಲದ ಬಗ್ಗೆ ಉನ್ನತ ಮಟ್ಟದ ಚರ್ಚೆ ನಡೆದಿರುವುದಾಗಿ ವರದಿ ತಿಳಿಸಿದೆ.