ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಪಾಕಿಸ್ತಾನ ಕೈವಾಡ ಇರುವುದು ಸಾಬೀತಾಗುತ್ತಿದ್ದಂತೆ ಕೇಂದ್ರ ಸರ್ಕಾರ ಪಾಕಿಸ್ತಾನದ ವಿರುದ್ಧ ರಾಜತಾಂತ್ರಿಕ ಯುದ್ಧ ಪ್ರಾರಂಭಿಸಿದೆ.
ಅದಕ್ಕಾಗಿ ಕೆಲವು ಅತ್ಯಂತ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡಿದೆ.
ಪಹಲ್ಗಾಮ್ ಭಯೋತ್ಪಾದಕ ದಾಳಿ ಹಿನ್ನೆಲೆಯಲ್ಲಿ, ಪ್ರಧಾನಿ ಮೋದಿ ಅವರು ತಮ್ಮ ನಿವಾಸದಲ್ಲಿ ಭದ್ರತೆ ಕುರಿತು ಸಂಪುಟ ಸಮಿತಿ (ಸಿಸಿಎಸ್) ಸಭೆ ನಡೆಸಿದರು.
ಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಹಲವು ಕೇಂದ್ರ ನಾಯಕರು ಭಾಗವಹಿಸಿದ್ದರು.
ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಅವರು ಸಿಸಿಎಸ್ ಸಭೆಯ ನಂತರ
ಸುದ್ದಿಗೋಷ್ಠಿ ಸಭೆಯಲ್ಲಿ ತೆಗೆದುಕೊಂಡ ನಿರ್ಧಾರಗಳನ್ನು ಪ್ರಕಟಿಸಿದರು.
ಪಾಕ್ ಜೊತೆಗಿನ ಸಿಂಧೂ ನದಿ ನೀರು ಒಪ್ಪಂದ ಅಮಾನತು ಮಾಡಲು ನಿರ್ಧರಿಸಲಾಗಿದೆ.
ಭಾರತದಲ್ಲಿರುವ ಪಾಕಿಸ್ತಾನಿ ರಾಯಭಾರ ಕಚೇರಿ ಮುಚ್ಚಲು ಹಾಗೂ ಪಾಕ್ ಪ್ರಜೆಗಳಿಗೆ ವೀಸಾ ಕೊಡದಿರಲು ನಿರ್ಧಾರ ಮಾಡಲಾಗಿದೆ.
ಪಾಕಿಸ್ತಾನಿ ರಾಜತಾಂತ್ರಿಕರು 48 ಗಂಟೆಯೊಳಗೆ ಭಾರತವನ್ನು ತೊರೆಯುವಂತೆ ಗಡುವು ನೀಡಲಾಗಿದೆ.ಭಾರತದಲ್ಲಿರುವ ಪಾಕ್ ಪ್ರಜೆಗಳು ದೇಶ ಬಿಟ್ಟು ಹೋಗಲು ಗಡುವು ನೀಡಲಾಗಿದೆ.
ಅಟ್ಟಾರಿ ಗಡಿ ಚೆಕ್‌ಪೋಸ್ಟ್ ಮುಚ್ಚಲು ನಿರ್ಧಾರಿಸಲಾಗಿದೆ ಎಂದು ಮಾಹಿತಿ ನೀಡಿದರು.