ಮೈಸೂರು: ಅಹಮದಾಬಾದ್ ನಲ್ಲಿ ಭಾನುವಾರ ನಡೆದ ಟಿ 20 ಕ್ರಿಕೆಟ್ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ಭಾರತ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ನಗರದ ಚಾಮುಂಡಿಪುರಂ ವೃತದಲ್ಲಿ ಕ್ರಿಕೆಟ್ ಅಭಿಮಾನಿಗಳು ತ್ರಿವರ್ಣಧ್ವಜ ಹಿಡಿದು ಸಿಹಿ ಹಂಚಿ ಸಂಭ್ರಮಿಸಿದರು.
ಈ ಸಂಭ್ರಮಾಚರಣೆಯಲ್ಲಿ ಅಪೂರ್ವ ಸ್ನೇಹ ಬಳಗದ ಅಧ್ಯಕ್ಷರಾದ ಅಪೂರ್ವ ಸುರೇಶ್ ,ನಗರ ಪಾಲಿಕೆ ಮಾಜಿ ಸದಸ್ಯರಾದ ಜಗದೀಶ್,ದೂರ ರಾಜಣ್ಣ, ಗೌರಿಶಂಕರ್ ನಗರದ ಶಿವು,ಜಿತ್ತಿಪ್ರಸಾದ್,ನಿವೃತ್ತ ಶಿಕ್ಷಕರಾದ ಮಹದೇವಸ್ವಾಮಿ
ಶಿವಲಿಂಗ ಸ್ವಾಮಿ ಸೇರಿದಂತೆ ಅನೇಕ ಅಭಿಮಾನಿಗಳು ಪಾಲ್ಗೊಂಡಿದ್ದರು.
