ಮೈಸೂರು: ಏಷ್ಯಾ ಕಪ್ ಟಿ20 ಟೂರ್ನಿಯ ಹೈ ವೋಲ್ಟೇಜ್ ಫೈನಲ್ ಪಂದ್ಯದ ರೋಚಕ ಹಣಾಹಣಿಯಲ್ಲಿ ಭಾರತವು ಪಾಕಿಸ್ತಾನದ ವಿರುದ್ಧ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಅಭಿಮಾನಿಗಳು ಸಿಹಿ ಹಂಚಿ ಸಂಭ್ರಮಿಸಿದರು.
ಭಾರತವು 5 ವಿಕೆಟ್ ಗಳಿಂದ ಪಾಕಿಸ್ತಾನವನ್ನು ವಿರೋಚಿತವಾಗಿ ಸೋಲಿಸಿದ್ದು ಅದರ ಹಿನ್ನೆಲೆಯಲ್ಲಿ ಮೈಸೂರಿನ ಚಾಮುಂಡಿಪುರಂ ವೃತ್ತದಲ್ಲಿ ಅಪೂರ್ವ ಸ್ನೇಹ ಬಳಗ ಹಾಗೂ ಕ್ರಿಕೆಟ್ ಅಭಿಮಾನಿಗಳು ಭಾರತದ ಧ್ವಜ ಹಿಡಿದು,
ನಮ್ಮ ಕ್ರಿಕೆಟ್ ತಂಡದ ಆಟಗಾರರಿಗೆ ಜೈಕಾರ ಕೂಗಿ ಸಿಹಿ ಹಂಚಿ ಸಂಭ್ರಮಿಸಿದರು.
ಅಪೂರ್ವ ಸ್ನೇಹ ಬಳಗದ ಅಧ್ಯಕ್ಷರಾದ ಅಪೂರ್ವ ಸುರೇಶ್, ಮೈಸೂರ್ ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೇಬಲ್ ಮಹೇಶ್, ನಗರ ಪಾಲಿಕೆ ಮಾಜಿ ಸದಸ್ಯ ಜಗದೀಶ್, ಆನಂದ್, ಸುಚೇಂದ್ರ, ಪುರುಷೋತ್ತಮ್, ಜತ್ತಿ ಪ್ರಸಾದ್, ಶಿವಲಿಂಗ ಸ್ವಾಮಿ, ಎಸ್ ಎನ್ ರಾಜೇಶ್, ರಾಕೇಶ್, ಚಕ್ರಪಾಣಿ ಸೇರಿದಂತೆ ಅನೇಕ ಅಭಿಮಾನಿಗಳು ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿದ್ದರು.